*ಭೀಕರ ಕಾರು ಅಪಘಾತ; ಮೂವರು ಯುವಕರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಲಾರಿ-ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗ ತಾಲೂಕಿನ ಕಲ್ಲಾಪುರ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಯುವಕರು ಸಾವನ್ನಪ್ಪಿದ್ದಾರೆ. ವಿವೇಕ್, ಕಾರ್ತಿಕ್ ಹಾಗೂ ಮೋಹನ್ ಮೃತರು. ಮೃತ ಮೂವರು 21 ವರ್ಷದ ಯುವಕರು. ಇನ್ನೋರ್ವ ಯುವಕ ರುದ್ರೇಶ್ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು, ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತ ಯುವಕರು ದಾವಣಗೆರೆ ಮೂಲದ ನಿವಾಸಿಗಳು. ಶಿವಮೊಗ್ಗದಿಂದ ಸವಳಂಗ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ಎದುರಿನಿಂದ ಬಂದ ಲಾರಿ ಮುಖಾಮುಖಿ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಇನ್ನು ಲಾರಿ ಚಾಲಕನನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
*ಶೈಕ್ಷಣಿಕ ಪ್ರವಾಸದ ವೇಳೆ ದುರಂತ; ವಿದ್ಯಾರ್ಥಿನಿ ದುರ್ಮರಣ*
https://pragati.taskdun.com/studentdeathshravanabelagolaschool-trip/




