
ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಈ ವರೆಗೆ ಯಾವುದೇ ಸೋಂಕು ಪ್ರಕರಣ ಇಲ್ಲದೆ ಗ್ರೀನ್ ಝೋನ್ ನಲ್ಲಿ ಗುರುತಿಸಿಕೊಂಡಿದ್ದ ಶಿವಮೊಗ್ಗ ಜಿಲ್ಲೆಯಲ್ಲಿ ಸಹ ಇದೀಗ 8 ಹೊಸ ಪ್ರಕರಣಗಳು ಪತ್ತೆಯಾಗಿರುವುದು ರಾಜ್ಯ ಸರ್ಕಾರಕ್ಕೆ ಹೊಸ ತಲೆ ನೋವಾಗಿ ಪರಿಣಮಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಶಿವಮೊಗ್ಗದಲ್ಲಿ ಇದುವರೆಗೂ ಯಾವುದೇ ಕೊರೊನಾ ಸೋಂಕು ಪ್ರಕರಣ ಇರಲಿಲ್ಲ. ಆದರೆ ಜಿಲ್ಲೆಯಲ್ಲಿ ಇಂದು ಒಂದೇ ದಿನದಲ್ಲಿ 8 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ 8 ಸೋಂಕಿತರೂ ಗುಜರಾತಿನ ಅಹ್ಮದಾಬಾದ್ ಗೆ ಪ್ರಯಾಣಿಸಿದ್ದರು ಎಂದರು.
ರಾಜ್ಯದಲ್ಲಿ ಸಾಕಷ್ಟು ಸೋಂಕು ಇದ್ದರೂ ಕೂಡ ಈವರೆಗೆ ಜಿಲ್ಲೆಯಲ್ಲಿ ಸೋಂಕು ಬರದಂತೆ ಜಿಲ್ಲಾಧಿಕಾರಿ, ಪೊಲೀಸರು, ವೈದ್ಯರಲ್ಲರೂ ಶ್ರಮಿಸಿದ್ದರು. ಅವರ ಕಾರ್ಯದಿಂದ ಈವರೆಗೆ ಜಿಲ್ಲೆಗೆ ಸೋಂಕು ಹರಡಿರಲಿಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಆದರೆ ಇಂದು ಒಂದೇ ದಿನದಲ್ಲಿ 8 ಜನರಲ್ಲಿ ಕೊರೊನಾ ಪಾಸಿಟೀವ್ ಪತ್ತೆಯಾಗಿದೆ. ಜಿಲ್ಲೆಯ ಜನರ ಪರವಾಗಿ ನಾನು ನಮ್ಮ ಅಧಿಕಾರಿಗಳಿಗೆ ಯಾರೂ ನೋವು ಮಾಡಿಕೊಳ್ಳಬೇಡಿ ಎಂದುವೆ ಹೇಳಿದರು.
ಜಿಲ್ಲೆಯ ಎಲ್ಲಾ ಜನತೆ ಕೊರೊನಾ ವಾರಿಯರ್ಸ್ ಜತೆಗಿದ್ದೇವೆ. ಎಲ್ಲರೂ ಒಗ್ಗಟ್ಟಿನಿಂದ ಸೋಂಕಿನ ವಿರುದ್ಧ ಹೋರಾಡೋಣ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ