Kannada NewsKarnataka NewsLatest

*ಐವರ ಮೇಲೆ ಹುಚ್ಚು ನಾಯಿ ದಾಳಿ; 6 ವರ್ಷದ ಬಾಲಕಿಗೆ ಗಂಭೀರ ಗಾಯ*

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಇಬ್ಬರು ಮಕ್ಕಳು ಸೇರಿದಂತೆ ಐದು ಜನರ ಮೇಲೆ ಹುಚ್ಚು ನಾಯಿಯೊಂದು ದಾಳಿ ನಡೆಸಿರುವ ಘಟನೆ ಶಿವಮೊಗ್ಗ ತಾಲೂಕಿನ ಹೊಳೆಬೆಳಗಲು ಗ್ರಾಮದಲ್ಲಿ ನಡೆದಿದೆ.

ಹುಚ್ಚು ನಾಯಿ ದಾಳಿಯಿಮ್ದ 6 ವರ್ಷದ ಬಾಲಕಿ ಬೇಬಿ ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರು ಕೂಡ ಆಸ್ಪತ್ರೆಗೆ ದಾಖಲಾಗಿದ್ದಾರೆ.

6 ವರ್ಷದ ಬೇಬಿ, ನಂಜುಂಡಪ್ಪ ಹಾಗೂ ಮಣಿ ದಂಪತಿಯ ಪುತ್ರಿ. ಇಂದು ಶಾಲೆ ಮುಗಿಸಿ ಮಧ್ಯಾಹ್ನ ಮನೆಗೆ ವಾಪಸ್ ಆಗುತ್ತಿದ್ದಾಗ ಹುಚ್ಚು ನಾಯಿಯೊಂದು ದಾಳಿ ನಡೆಸಿದೆ. ನಾಯಿ ದಾಳಿಗೆ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಬಾಲಕಿ ಮೇಲೆ ನಾಯಿ ದಾಳಿ ನಡೆಸುತ್ತಿರುವ ಭಯಂಕ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button