*ಐವರ ಮೇಲೆ ಹುಚ್ಚು ನಾಯಿ ದಾಳಿ; 6 ವರ್ಷದ ಬಾಲಕಿಗೆ ಗಂಭೀರ ಗಾಯ*

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಇಬ್ಬರು ಮಕ್ಕಳು ಸೇರಿದಂತೆ ಐದು ಜನರ ಮೇಲೆ ಹುಚ್ಚು ನಾಯಿಯೊಂದು ದಾಳಿ ನಡೆಸಿರುವ ಘಟನೆ ಶಿವಮೊಗ್ಗ ತಾಲೂಕಿನ ಹೊಳೆಬೆಳಗಲು ಗ್ರಾಮದಲ್ಲಿ ನಡೆದಿದೆ. ಹುಚ್ಚು ನಾಯಿ ದಾಳಿಯಿಮ್ದ 6 ವರ್ಷದ ಬಾಲಕಿ ಬೇಬಿ ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರು ಕೂಡ ಆಸ್ಪತ್ರೆಗೆ ದಾಖಲಾಗಿದ್ದಾರೆ. 6 ವರ್ಷದ ಬೇಬಿ, ನಂಜುಂಡಪ್ಪ ಹಾಗೂ ಮಣಿ ದಂಪತಿಯ ಪುತ್ರಿ. ಇಂದು ಶಾಲೆ ಮುಗಿಸಿ ಮಧ್ಯಾಹ್ನ ಮನೆಗೆ ವಾಪಸ್ ಆಗುತ್ತಿದ್ದಾಗ ಹುಚ್ಚು … Continue reading *ಐವರ ಮೇಲೆ ಹುಚ್ಚು ನಾಯಿ ದಾಳಿ; 6 ವರ್ಷದ ಬಾಲಕಿಗೆ ಗಂಭೀರ ಗಾಯ*