Kannada NewsKarnataka NewsLatestPolitics

*ಫ್ರೀಡಂ ಪಾರ್ಕ್ ಗೆ ಅಲ್ಲಮಪ್ರಭು ಹೆಸರು; ಸಿಎಂ ಮಹತ್ವದ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಅನುಭವ ಮಂಟಪದ ಅಧ್ಯಕ್ಷರಾಗಿ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಮೊದಲಿಗೆ ಈ ನೆಲದಲ್ಲಿ ಸ್ಥಾಪಿಸಿದ ಅಲ್ಲಮಪ್ರಭುವಿನ ಹೆಸರನ್ನು ಶಿವಮೊಗ್ಗದ ಫ್ರೀಡಂಪಾರ್ಕಿಗೆ ಇಡುತ್ತೇವೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಶಿವಮೊಗ್ಗ ಫ್ರೀಡಂ ಪಾರ್ಕ್ ನಲ್ಲಿ ಯುವನಿಧಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಸಿಎಂ ಸಿದ್ದರಾಅಯ್ಯ, ಅಲ್ಲಮಪ್ರಭು ಅವರಿಂದಲೇ ಇಲ್ಲಿ ಪ್ರಜಾಪ್ರಭುತ್ವ ಸ್ಥಾಪನೆ ಆಯಿತು. ಅಲ್ಲಮಪ್ರಭು ಶಿವಮೊಗ್ಗ ಜಿಲ್ಲೆಯವರಾಗಿದ್ದರು. ಅವರ ನೆನಪಿನಾರ್ಥ ಇಲ್ಲಿನ ಫ್ರೀಡಂ ಪಾರ್ಕಿಗೆ ಅಲ್ಲಮ ಪ್ರಭು ಹೆಸರು ಇಡಲಾಗುವುದು. ಶಿವಮೊಗ್ಗ ಜಿಲ್ಲೆಯವರೇ ಆದ ಬಸವಾದಿ ಶರಣ ಅಲ್ಲಮ ಪ್ರಭುವಿಗೆ ನಮ್ಮ ಕಾಂಗ್ರೆಸ್ ಸರ್ಕಾರ ಕೊಡುವ ಗೌರವ ಎಂದರು.

ಮುಖ್ಯಮಂತ್ರಿಗಳು ಅಲ್ಲಮ ಪ್ರಭುವಿನ ಹೆಸರನ್ನು ಘೋಷಿಸುತ್ತಿದ್ದಂತೆ ನೆರೆದಿದ್ದ ಲಕ್ಷಾಂತರ ಮಂದಿ ಕುಳಿತಿದ್ದ ಕುರ್ಚಿಗಳಿಂದ ಮೇಲೆದ್ದು ಚಪ್ಪಾಳೆ ತಟ್ಟಿ ಕುಣಿದು, ಕೂಗಿ ಸಂಭ್ರಮದಿಂದ ಸ್ವಾಗತಿಸಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button