Latest

ನದಿಗೆ ಹಾರಲು ಹೊರಟಿದ್ದ ಯುವತಿ: ಠಾಣೆಗೆ ಕರೆತಂದ ಪೊಲೀಸ್

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಆತ್ಮಹತ್ಯೆಗೆ ಮುಂದಾಗಿದ್ದ ಯುವತಿಯನ್ನು ಪೊಲೀಸ್ ಕಾನ್ಸ್‌ಟೇಬಲ್ ರಕ್ಷಣೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

ವಿನಾಯಕನಗರ ನಿವಾಸಿ 24 ವರ್ಷದ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದು, ಕೋಟೆ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಮನು ಶಂಕರ್ ಯುವತಿಯನ್ನು ರಕ್ಷಿಸಿದ್ದಾರೆ.

ಯುವತಿ ಮಧ್ಯರಾತ್ರಿ ಬೆಕ್ಕಿನಕಲ್ಮಠದ ಬಳಿ ತುಂಗಾನದಿಗೆ ಹಾರಿ ಆತ್ಮಹತ್ಯೆಗೆ ಮುಂದಾಗಿದ್ದಳು. ಮಧ್ಯರಾತ್ರಿ ವೇಳೆ ಯುವತಿ ರಸ್ತೆಯಲ್ಲಿ ನದಿಯ ಬಳಿ ಏಕಾಂಗಿಯಾಗಿ ಹೋಗುವುದನ್ನು ಕಾನ್ಸ್‌ಟೇಬಲ್ ಮನು ಶಂಕರ್ ಗಮನಿಸಿದ್ದಾರೆ. ಯುವತಿಯನ್ನು ವಿಚಾರಿಸಿದ್ದು, ಈ ವೇಳೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂಬ ವಿಷಯ ಅರಿತ ಕಾನ್ಸ್‌ಟೇಬಲ್ ಯುವತಿಯನ್ನು ರಕ್ಷಣೆ ಮಾಡಿದ್ದಾರೆ.

ಮಗಳು ಮನೆಯಲ್ಲಿ ಇಲ್ಲದಿರುವುದನ್ನು ಪೋಷಕರು ಗಮನಿಸಿದ್ದು, ಮಧ್ಯರಾತ್ರಿಯೇ ಹುಡುಕಿಕೊಂಡು ಹೊರಟಿದ್ದರು. ಈ ವೇಳೆ ದಂಪತಿಗೆ ಜಯನಗರ ಪೊಲೀಸ್ ಠಾಣೆಯ ಪೊಲೀಸ್ ಗಂಗಾಧರ್ ಸಿಕ್ಕಿದ್ದಾರೆ. ಮಗಳು ಹೆಚ್ಚು ಮೊಬೈಲ್ ಉಪಯೋಗಿಸುತ್ತಿದ್ದಳು. ಮೊಬೈಲ್ ಹೆಚ್ಚು ಬಳಸಬೇಡ ಒಳ್ಳೆಯದಲ್ಲ ಎಂದು ಬೈದಿದ್ದಕ್ಕೆ ಕೋಪಗೊಂಡು ಮನೆ ಬಿಟ್ಟು ಹೋಗಿದ್ದಾಳೆ. ದಯವಿಟ್ಟು ಹುಡುಕಿಕೊಡಿ ಎಂದು ಕೋರಿದ್ದಾರೆ. ಪೊಲೀಸ್ ಕಾನ್ಸ್ ಟೇಬಲ್ ಗಂಗಾಧರ್ ಕಂಟ್ರೋಲ್ ರೂಮ್‍ಗೆ ವಿಷಯ ತಿಳಿಸಿದ್ದಾರೆ. ಈ ವೇಳೆ ಕೋಟೆ ಠಾಣೆ ಕಾನ್ಸ್ ಟೇಬಲ್ ಮನು ಆತ್ಮಹತ್ಯೆಗೆ ಮುಂದಾಗಿದ್ದ ಯುವತಿಯನ್ನು ತಡೆದು ನಿಲ್ಲಿಸಿದ್ದಾರೆ.

ಜಯನಗರ ಠಾಣೆಗೆ ಕರೆತಂದು ಬುದ್ದಿವಾದ ಹೇಳಿ ಯುವತಿಯನ್ನು ಪೋಷಕರ ಜತೆ ಕಳುಹಿಸಿಕೊಟ್ಟಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button