CrimeKannada NewsKarnataka NewsLatest

*ಗ್ರಾಮ ಪಂಚಾಯಿತಿ ಮಾಜಿ ಸದಸ್ಯನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ*

ಪ್ರಗತಿವಾಹಿನಿ ಸುದ್ದಿ: ಹಣದ ವಿಚಾರವಾಗಿ ದುಷ್ಕರ್ಮಿಗಳ್ ಅಗುಂಪು ಗ್ರಾಮ ಪಂಚಾಯತಿಯ ಮಾಜಿ ಸದಸ್ಯರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಡಿರುವ ಘಟನೆ ನಡೆದಿದೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರಿನಲ್ಲಿ ಈ ಘಟನೆ ನಡೆದಿದೆ. ಅತಾವುಲ್ಲಾ (46) ಕೊಲೆಯಾದ ದುರ್ದೈವಿ. ತಡರತರಿ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಅಡಿಕೆ ಕೊಯ್ಯುವ ಕತ್ತಿ, ಮಚ್ಚುಗಳಿಂದ ಕೊಚ್ಚಿ ಅತಾವುಲ್ಲಾ ಅವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಭದ್ರಾವತಿಯ ಶೇಖ್ ದಸ್ತುಗಿರಿ, ಜಬೀವುಲ್ಲಾ ಸಹಚರರಿಂದ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button