Kannada NewsKarnataka NewsLatest

*ವಿದ್ಯಾರ್ಥಿಗಳಿಂದ ಶೌಚಾಲಯ ಕ್ಲೀನ್ ಮಾಡಿಸಿದ ಪ್ರಕರಣ; ಪ್ರಭಾರಿ ಮುಖ್ಯ ಶಿಕ್ಷಕ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಗುಡ್ಡದ ನೇರಲೆಕೆರೆ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕರನ್ನು ಅಮಾನತುಮಾಡಲಾಗಿದೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಗುಡ್ಡದ ನೇರಲೆಕೆರೆ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛ ಮಾಡಿಸಿದ್ದ ವಿಡಿಯೋ ವೈರಲ್ ಆಗಿತ್ತು. ಕೋಲಾರ, ಬೆಂಗಳೂರು ಶಾಲೆಯ ಬಳಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆಯಲ್ಲಿಯೇ ಈ ಘತನೆ ನಡೆದಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.

ಶಾಲೆಯ ಮುಖ್ಯಶಿಕ್ಷಕರು, ಸಹ ಶಿಕ್ಷಕರ ವಿರುದ್ಧ ಕ್ರಮ ಜರುಗಿಸುವಂತೆ ಪೋಷಕರು ಆಗ್ರಹಿಸಿದ್ದರು. ಘಟನೆ ಬೆಳಕಿಗೆ ಬರುತ್ತಿದ್ದಂತೆ ಡಿಡಿಪಿಐ ಪರಮೇಶ್ವರಪ್ಪ ಗುಡ್ಡದ ನೇರಲೆಕೆರೆ ಶಾಲೆಗೆ ತೆರಳಿ ಪರುಶೀಲನೆ ನಡೆಸಿದ್ದರು.ಪ್ರಕರಣ ಸಂಬಂಧ ಪ್ರಭಾರಿ ಮುಖ್ಯ ಶಿಕ್ಷಕ ಶಂಕರಪ್ಪ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button