ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಬೆಳಗಿನ ತಿಂಡಿ ಇಡ್ಲಿ-ಸಾಂಬಾರ್ ಎಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಆದರೆ ಇಡ್ಲಿಯೇ ಇಲ್ಲೊಬ್ಬ ವ್ಯಕ್ತಿಯ ಪ್ರಾಣಕ್ಕೆ ಕುತ್ತಾಗಿದೆ. ಬೆಳಗಿನ ಉಪಹಾರಕ್ಕಾಗಿ ಇಡ್ಲಿ ಸಾಂಬಾರ್ ಸೇವನೆ ವೇಳೆ ಗಂಟಲಲ್ಲಿ ಇಡ್ಲಿ ಸಿಲುಕಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಹಳ್ಳಿಬೈಲು ಗ್ರಾಮದಲ್ಲಿ ನಡೆದಿದೆ.
ಕೋಳಿ ಅಂಗಡಿ ಮಾಲೀಕ ಸಂತೋಷ್(27) ಮೃತರು. ಬೆಳಿಗ್ಗೆ ಇಡ್ಲಿ ತಿನ್ನುತ್ತಿದ್ದ ಸಂತೋಷ್ ಏಕಾಏಕಿ ಕುಸಿದುಬಿದ್ದಿದ್ದಾರೆ. ಹೃದಯಾಘಾತವಾಗಿರಬೇಕು ಎಂದು ಕುಟುಂಬದವರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲೇ ಸಂತೋಷ್ ಸಾವನ್ನಪ್ಪಿದ್ದರು.
ಮರಣೋತ್ತರ ಪರೀಕ್ಷೆಯಲ್ಲಿ ಸಂತೋಷ್ ಹೃದಯಾಘಾತದಿಂದ ಸಾವನ್ನಪ್ಪಿಲ್ಲ. ಬದಲಾಗಿ ಗಂಟಲಲ್ಲಿ ಇಡ್ಲಿ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ