Karnataka News

*ಮಂಗನ ಕಾಯಿಲೆಗೆ 8 ವರ್ಷದ ಬಾಲಕ ಬಲಿ*

ಪ್ರಗತಿವಾಹಿನಿ ಸುದ್ದಿ: ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ಹೆಚ್ಚುತ್ತಿದ್ದು, 8 ವರ್ಷದ ಬಾಲಕ ಬಲಿಯಾಗಿರುವ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ದತ್ತರಾಜಪುರದಲ್ಲಿ 8 ವರ್ಷದ ಬಾಲಕ ಮಂಗನ ಕಾಯಿಲೆಗೆ ಸಾವನ್ನಪ್ಪಿದ್ದಾನೆ. ರಚಿತ್ ಮೃತ ಬಾಲಕ. 15 ದಿನಗಳ ಹಿಂದೆ ರಚಿತ್ ಹಾಗೂ ಆತನ ಸಹೋದರಿಗೆ ಮಂಗನ ಕಾಯಿಲೆ ಸೋಂಕು ದೃಢಪಟ್ಟಿತ್ತು.

ಇಬ್ಬರನ್ನೂ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ರಚಿತ್ ಸಹೋದರು ಗುಣಮುಖಳಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಳು. ಆದರೆ ರಚಿತ್ ಸ್ಥಿತಿ ಗಂಭೀರವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ 8:30ರ ಸುಮಾರಿಗೆ ರಚಿತ್ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾನೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button