Latest

ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗದ ಮೇಲಿನಹನಸವಾಡಿ ಬಳಿ ಈ ದುರ್ಘಟನೆ ಸಂಭವಿಸಿದ್ದು, ಬೈಕ್ ನಲ್ಲಿ ತೆರಳುತ್ತಿದ್ದ ಯುವಕ-ಯುವತಿ ಸಾವನ್ನಪ್ಪಿದ್ದಾರೆ. ಮೃತರನ್ನು 21 ವರ್ಷದ ರಘು ಹಾಗೂ 19 ವರ್ಷದ ಸುಮಾ ಎಂದು ಗುರುತಿಸಲಾಗಿದೆ.

ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Home add -Advt

Related Articles

Back to top button