Latest

ಪೊಲೀಸ್ ವರಿಷ್ಠಾಧಿಕಾರಿಗೆ ಗ್ರಾಮೀಣಾಭಿವೃದ್ಧಿ ಸಚಿವರ ಖಡಕ್ ವಾರ್ನಿಂಗ್

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಪೊಲೀಸ್ ವರಿಷ್ಠಾಧಿಕಾರಿ ವಿರುದ್ಧವೇ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಗರಂ ಆಗಿ ಎಚ್ಚರಿಕೆ ನೀಡಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅಪರಾಧ ತಡೆಗಟ್ಟುವಲ್ಲಿ ಪೊಲೀಸರ ವೈಫಲ್ಯ ಎದ್ದು ಕಾಣುತ್ತಿದೆ. ಸರಿಯಾಗಿ ಕೆಲಸ ಮಾಡುವುದಾದರೆ ಮಾಡಿ, ಇಲ್ಲದಿದ್ದರೆ ಹೊರಡಿ. ಜಿಲ್ಲೆಗೆ ಬೇರೆಯವರನ್ನು ಹಾಕಿಸಿಕೊಳ್ಳುತ್ತೇವೆ ಎಂದು ಎಸ್‍ಪಿ ವಿರುದ್ದ ಗುಡುಗಿದ್ದಾರೆ.

Home add -Advt

ಶಿವಮೊಗ್ಗದ ಸೀಗೆಹಟ್ಟಿ ಬಡಾವಣೆಯಲ್ಲಿ ಗುರುವಾರ ರಾತ್ರಿ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಹಾಗೂ ಆಟೋಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು. ವಾಹನಗಳಿಗೆ ಬೆಂಕಿ ಬಿದ್ದಿದ್ದ ಪ್ರದೇಶಕ್ಕೆ ಸಚಿವ ಈಶ್ವರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಸಚಿವರು, ಕಳೆದ ವಾರ ಸಹ ಶಿವಮೊಗ್ಗದ ತುಂಗಾನಗರ ಠಾಣೆ ವ್ಯಾಪ್ತಿಯಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಕಾರು, ಬೈಕ್ ಹಾಗೂ ಲಾರಿಗೆ ಬೆಂಕಿ ಹಚ್ಚಲಾಗಿದೆ. ಕೊಲೆ ಪ್ರಕರಣಗಳು ನಡೆಯುತ್ತಿವೆ. ಹೀಗಿದ್ದರೂ ಪೊಲೀಸ್ ಇಲಾಖೆ ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವಲ್ಲಿ, ಇಂತಹ ಪ್ರಕರಣ ತಡೆಗಟ್ಟುವಲ್ಲಿ ಮುಂದಾಗಿಲ್ಲ ಎಂಬ ಅಸಮಾಧಾನ ವ್ಯಕ್ತಪಡಿಸಿದರು.

Related Articles

Back to top button