
ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಅವರ ಪುತ್ರ ಬಸ್ಸವೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಫೆ.28ರಂದು ರಾತ್ರಿ ನಡೆದ ಪ್ರೊ ಕಬಡ್ಡಿ ಪಂದ್ಯಾವಳಿಯ ಫೈನಲ್ ವೇಳೆ ಗಲಾಟೆ ನಡೆದಿದ್ದು, ಬಿಜೆಪಿ ಪ್ರಮುಖರ ಮೇಲೆ ಹಲ್ಲೆ ನಡೆದಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ಬಸವೇಶ್ ನಾಪತ್ತೆಯಾಗಿದ್ದ. ಇದೀಗ ಬಸವೇಶ್ ನನ್ನು ಚಳ್ಳಕೆರೆ ಬಳಿ ಪೊಲೀಸರು ಬಂಧಿಸಿದ್ದಾರೆ.
ಹಳೆನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




