Belagavi NewsBelgaum NewsKannada NewsKarnataka NewsLatest

*ಜೈನಮುನಿ ಹತ್ಯೆ; ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ತೀವ್ರ ಖಂಡನೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕಳೆದ 15 ವರ್ಷಗಳಿಂದ ‘ಅಹಿಂಸೆ ಪರಮೋಧರ್ಮ’ ಎಂದು ಶಾಂತಿ ಮಂತ್ರ ಸಾರುತ್ತ ಧರ್ಮ ಪ್ರಚಾರ ಮಾಡಿದ್ದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಜೈನ ಆಶ್ರಮದ ಕಾಮಕುಮಾರ ನಂದಿ ಮಹಾರಾಜ ಅವರ ಹತ್ಯೆಯನ್ನು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಖಂಡಿಸಿದ್ದಾರೆ.

ಸಮಾಜಕ್ಕೆ ಶಾಂತಿ ಮಂತ್ರ ಸಾರುವ ಸಾಧುಗಳು, ಜೈನ ಮುನಿಗಳ ಇಂಥ ಹತ್ಯೆ ಖೇದಕರ. ಕಾಮಕುಮಾರ ನಂದಿ ಮಹಾರಾಜ ಜೈನ ಮುನಿಗಳು ಅಪಾರ ಭಕ್ತಗಣವನ್ನು ಹೊಂದಿದ್ದರು. ಅವರ ಭಕ್ತರಿಗೆ ದುಃಖ ಭರಿಸುವ ಶಕ್ತಿ ದೇವರು ದಯಪಾಲಿಸಲಿ ಎಂದು ಸಂತಾಪ ಸೂಚಿಸಿದ್ದಾರೆ.


Related Articles

Back to top button