ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಹಿಜಾಬ್ ಹಾಗೂ ಕೇಸರಿ ಶಾಲು ತಾರಕಕ್ಕೇರಿದ್ದ ಶಿವಮೊಗ್ಗ ಕಾಲೇಜಿನಲ್ಲಿ ನಿನ್ನೆ ಕೇಸರಿ ಬಾವುಟ ಹಾರಿಸಿ ಆಕ್ರೋಶ ವ್ಯಕ್ತಪಡಿಸಲಾಗಿತ್ತು. ಇದು ರಾಜ್ಯಾದ್ಯಂತ ಮತ್ತಷ್ಟು ವಿವಾದಕ್ಕೆ ಕಾರಣವಾಗಿತ್ತು.
ಶಿವಮೊಗ್ಗ ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ನಿನ್ನೆ ಕೇಸರಿ ಧ್ವಜ ಹಾರಿಸಲಾಗಿತ್ತು. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಎನ್ ಎಸ್ ಯುಐ ಸಂಘಟನೆ ಇಂದು ರಾಷ್ಟ್ರಧ್ವಜವನ್ನು ಹಾರಿಸಿದೆ.
ಈ ವೇಳೆ ಪ್ರತಿಕ್ರಿಯಿಸಿರುವ ಎನ್ ಎಸ್ ಯುಐ ಕಾರ್ಯಕರ್ತರು, ದೇಶದಲ್ಲಿ ಹಿಜಾಬ್ ಅಥವಾ ಕೇಸರಿ ಶಾಲು ಇದೆಲ್ಲಕ್ಕಿಂತ ತ್ರಿವರ್ಣ ಧ್ವಜ ಸರ್ವಶ್ರೇಷ್ಠ. ಹೀಗಾಗಿ ರಾಷ್ಟ್ರಧ್ವಜ ಹಾರಿಸುವ ಮೂಲಕ ವಿದ್ಯಾರ್ಥಿಗಳು ಹಿಜಾಬ್ ಹಾಗೂ ಕೇಸರಿ ಶಾಲು ಈ ಚರ್ಚೆಯನ್ನು ಕೈಬಿಡಬೇಕು. ವಿದ್ಯಾರ್ಥಿಗಳು ರಾಜ್ಯದಲ್ಲಿ ಶಾಂತಿ, ಸೌಹಾರ್ದತೆ, ಸುವ್ಯವಸ್ಥೆ ಕಾಪಾಡಬೇಕು ಎಂದು ಮನವಿ ಮಾಡಿದರು.
ಹೆಣ್ಣು ಮಕ್ಕಳು ಹಠ ಮಾಡುವುದು ನೋಡಿದರೆ ಅನುಮಾನ ಎಂದ ಶಿಕ್ಷಣ ಸಚಿವ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ