Kannada NewsKarnataka NewsLatest

*ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ; ಶಿವಮೊಗ್ಗದಲ್ಲಿ ಮುಂದುವರೆದ ನಿಷೇಧಾಜ್ಞೆ*

ಪ್ರಗತಿವಹಿನಿ ಸುದ್ದಿ; ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣದ ಬೆನ್ನಲ್ಲೇ ಶಿವಮೊಗ್ಗದಲ್ಲಿ ಉದ್ವಿಗ್ನ ಪರಿಸ್ಥಿತಿಯುಂಟಾಗಿದ್ದು, ನಿಷೇಧಾಜ್ಞೆ ಮುಂದುವರೆಸಲಾಗಿದೆ.

ಶಿವಮೊಗ್ಗದ ರಾಗಿಗುಡ್ಡದಲ್ಲಿ ಎರಡು ದಿನಗಳ ಹಿಂದೆ ಈದ್ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳು ಸಿಕ್ಕ ಸಿಕ್ಕ ಕಡೆ, ಮನೆಗಳ ಮೇಲೆ, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಪರಿಸ್ಥಿತಿ ವಿಕೋಪಪಕ್ಕೆ ತಿರುಗಿದ ಬೆನ್ನಲ್ಲೇ ಉದ್ರಿಕ್ತರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು. ಕಲ್ಲುತೂರಾಟ ಘಟನೆಯಲ್ಲಿ ಇಬ್ಬರು ಪೊಲೀಸರು ಸೇರಿ 7 ಜನರು ಗಯಗೊಂಡಿದ್ದಾರೆ.

Home add -Advt

ಈ ನಡುವೆ ರಾಗಿಗುಡ್ಡದಲ್ಲಿ 144 ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಪರಿದ್ಸ್ಥಿತಿ ಇನ್ನೂ ಬೂದಿ ಮುಚ್ಚಿದ ಕೆಂಡದಂತಿರುವುದರಿಂದ ಇಂದು ಕೂಡ ನಿಷೇಧಾಜ್ಞೆ ಮುಂದುವರೆಸಲಾಗಿದ್ದು, ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

Related Articles

Back to top button