ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ; ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಸ್ವಂತ ಗ್ರಾಮದಲ್ಲಿಯೇ ದುಷ್ಕರ್ಮಿಗಳು ಮಹಿಳೆಯೊಬ್ಬರನ್ನು ಎಳೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಅರಗ ಗ್ರಾಮದಲ್ಲಿ ದಂಪತಿ ಮೇಲೆ ನಾಲ್ವರು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಮೊದಲು ಮಹಿಳೆಯ ಪತಿಯ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಲು ಆರಂಭಿಸಿದ್ದಾರೆ. ಇದನ್ನು ಕಂಡ ಮಹಿಳೆ ತಪ್ಪಿಸಲು ಹೋಗಿದ್ದಾಳೆ. ಈ ವೇಳೆ ಮಹಿಳೆಯನ್ನು ರಬ್ಬರ್ ಪ್ಲಾಂಟೇಷನ್ ಗೆ ಎಳೆದೊಯ್ದ ಕಿರಾತಕರು ಆಕೆಯನ್ನು ಥಳಿಸಿ, ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.
ಗಂಭೀರವಾಗಿ ಗಾಯಗೊಂಡಿರುವ ದಂಪತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಗ್ಗೆ ಮಾಹಿತಿ ಪಡೆದಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ದುಷ್ಕರ್ಮಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.
ಮುಹೂರ್ತದ ವೇಳೆ ಕೈಕೊಟ್ಟ ಕರೆಂಟ್; ಅಕ್ಕನ ವರ ತಂಗಿಗೆ, ತಂಗಿ ವರ ಅಕ್ಕನಿಗೆ ತಾಳಿ ಕಟ್ಟಿ ಎಡವಟ್ಟು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ