Kannada NewsKarnataka NewsLatest

*ತೀರ್ಥಹಳ್ಳಿ ಮನೆಯಲ್ಲಿ ಬೆಂಕಿ ದುರಂತ; ಅರ್ಚಕ ಸೇರಿ ಮೂವರು ಸಜೀವ ದಹನ*

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಬೆಂಗಳೂರಿನ ಆನೇಕಲ್ ನಲ್ಲಿ ಪಟಾಕಿ ಗೋಡೌನ್ ನಲ್ಲಿ ಅಗ್ನಿ ದುರಂತ ಸಂಭವಿಸಿ 14 ಜನ ಸಜೀವ ದಹನಗೊಡಿರುವ ಘಟನೆ ನಡೆದಿರುವ ಬೆನ್ನಲ್ಲೇ ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಒಂದೇ ಕುಟುಂಬದ ಮೂವರು ಸಜೀವ ದಹನಗೊಂಡಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದೆ.

ತೀರ್ಥಹಳ್ಳಿ ತಾಲೂಕಿನ ಹೊಸನಗರ ರಸ್ತೆ ಬಳಿಯ ಅರಳಸುರಳಿಯ ಗಣಪತಿ ಕಟ್ಟೆ ರೈಸ್ ಮಿಲ್ ಸಮೀಪದ ಅರ್ಚಕರ ಮನೆಯೊಂದರಲ್ಲಿ ಈ ದುರಂತ ಸಂಭವಿಸಿದೆ.

ಮನೆಯ ಒಳಗಡೆ ಕೋಣೆಯಲ್ಲಿ ಕಟ್ಟಿಗೆಗಳನ್ನು ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ ಎಂಬ ಅನುಮಾನವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ತನಿಖೆಯಿಂದಷ್ಟೇ ಬೆಂಕಿ ದುರಂತದ ಕಾರಣ ತಿಳಿದುಬರಬೇಕಿದೆ.

ಘಟನೆಯಲ್ಲಿ ಅರ್ಚಕ ರಾಘವೇಂದ್ರ ಕೆಕೋಡ್ (63), ಪತ್ನಿ ನಾಗರತ್ನ (55), ಹಿರಿಯ ಪುತ್ರ ಶ್ರೀರಾಮ್ (34) ಸಜೀವ ದಹನವಾಗಿದ್ದಾರೆ. ಇನ್ನೋರ್ವ ಮಗ ಭರತ್ (33) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button