ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಈಜಲೆಂದು ಭದ್ರಾ ನಾಲೆಗೆ ಇಳಿದಿದ್ದ ಇಬ್ಬರು ಮಕ್ಕಳು ನಾಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹಂಚಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ.
14 ವರ್ಷದ ಚಂದನಾ ಹಾಗೂ 10 ವರ್ಷದ ಹರ್ಷ ನಾಪತ್ತೆಯಾಗಿರುವ ಮಕ್ಕಳು. ಸಿದ್ದಾಪುರ ಬಳಿಯ ಭದ್ರಾ ಬಲದಂಡೆ ನಾಲೆಯಲ್ಲಿ ನಾಲ್ವರು ಮಕ್ಕಳು ಈಜಲು ತೆರಳಿದ್ದರು. ಈ ಸಂದರ್ಭದಲ್ಲಿ ಇಬ್ಬರು ಮಕ್ಕಳು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಶಾಲೆ ರಜೆ ಇದ್ದ ಹಿನ್ನೆಲೆಯಲ್ಲಿ ಮುದುವಾಲ ಗ್ರಾಮದ ಇಬ್ಬರು ಮಕ್ಕಳು ಅಗರದಹಳ್ಳಿಯ ತಮ್ಮ ದೊಡ್ಡಪ್ಪನ ಮನೆಗೆ ಬಂದಿದ್ದರು. ಈ ವೇಳೆ ನಾಲೆಗೆ ಈಜಲು ಹೋಗಿದ್ದಾರೆ.
ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆಗೆ ಸಂಪುಟ ಸಭೆ ಅನುಮೋದನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ