Latest

ಕಾಲುವೆಗೆ ಬಿದ್ದ ಕಾರು; ಪತ್ನಿ ದುರ್ಮರಣ; ಸ್ವಲ್ಪದರಲ್ಲಿ ಬಚಾವ್ ಆದ ಪತಿ

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಹಾವನ್ನು ತಪ್ಪಿಸಲು ಹೋಗಿ ತುಂಗಾ ಎಡದಂಡೆ ಕಾಲುವೆಗೆ ಕಾರು ಬಿದ್ದ ಪರಿಣಾಮ ಮಹಿಳೆಯೋರ್ವರು ಜಲಸಮಾಧಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಗಾಜನೂರು ಬಳಿ ನಡೆದಿದೆ.

ಸುಷ್ಮಾ (28) ಮೃತ ಮಹಿಳೆ. ಚೇತನ್ ಹಾಗೂ ಸುಷ್ಮಾ ದಂಪತಿ ತುಮಕೂರಿಗೆ ತೆರಳುತ್ತಿದ್ದರು. ಸುಷ್ಮಾ ತಾಯಿ ಅನಾರೋಗ್ಯ ಹಿನ್ನೆಲೆಯಲ್ಲಿ ಅವರನ್ನು ನೋಡಲೆಂದು ಕಾರಿನಲ್ಲಿ ಹೋಗುತ್ತಿದ್ದಾಗ ಗಾಜನೂರು ಬಳಿ ತುಂಗಾ ಕಾಲುವೆ ಸಮೀಪ ಹಾವೊಂದು ರಸ್ತೆಗೆ ಅಡ್ಡ ಬಂದಿದೆ. ಹಾವನ್ನು ತಪ್ಪಿಸಲು ಹೋಗಿ ಕಾರು ತುಂಗಾ ಕಾಲುವೆಗೆ ಬಿದ್ದಿದೆ.

ಚೇತನ್ ಪತ್ನಿ ಸುಷ್ಮಾ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಚೇತನ್ ನನ್ನು ಸ್ಥಳೀಯರು ರಕ್ಷಿಸಿದ್ದಾರೆ. ಹಾವು ತಪ್ಪಿಸಲು ಏಕಾಏಕಿ ಬ್ರೇಕ್ ಹಾಕುತ್ತಿದ್ದಂತೆ ಕಾರು ಕಾಲುವೆಗೆ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.
ರಮೇಶ್ ಜಾರಕಿಹೊಳಿ ವಿರುದ್ಧ ಸಿಡಿ ಕೇಸ್; ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ಅನುಮತಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button