ಪ್ರಗತಿವಾಹಿನಿ ಸುದ್ದಿ : ಕೆರೆ ಹೂಳು ತೆಗೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಿಇಒ ಬಂಧನಕ್ಕೆ ಕರ್ನಾಟಕ ಭೂಕಬಳಿಕೆ ನಿಷೇಧ ನ್ಯಾಯಾಲಯ ಆದೇಶ ಹೊರಡಿಸಿದೆ.
ಶಿವಮೊಗ್ಗ ಜಿಲ್ಲೆಯ ಅಬ್ಬಲಗೆರೆ ಗ್ರಾಮದಲ್ಲಿ ಅಕ್ರಮವಾಗಿ ಕೆರೆ ಹೂಳು ತೆಗೆಯಲಾಗಿತ್ತು. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾದ ಆರೋಪ ಕೇಳಿಬಂದಿತ್ತು. ಈ ಬಗ್ಗೆ ವರದಿ ಸಲ್ಲಿಸಲು ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಿಇಒ ವಿಳಂಬ ಮಾಡಿರುವ ಹಿನ್ನೆಲೆಯಲ್ಲಿ ಅವರನ್ನು ಬಂಧಿಸುವಂತೆ ಕೋರ್ಟ್ ಆದೇಶ ನೀಡಿದೆ.
500 ಲೋಡ್ ಮಣ್ಣು ತೆಗೆಯಲು ಅನುಮತಿ ಪಡೆದು 15,000 ಲೋಡ್ ಮಣ್ಣು ಸಾಗಾಣೆ ಮಾಡಲಾಗಿದೆ ಎಂಬ ಆರೊಪ ಕೇಳಿಬಂದಿತ್ತು. ಖಾಸಗಿ ಲೇಔಟ್ ನಿರ್ಮಾಣಕ್ಕಾಗಿ ಈ ಮಣ್ಣು ಸಾಗಿಸಲಾಗಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ 71.45 ಲಕ್ಷ ರೂ ನಷ್ಟವಾಗಿದೆ ಎಂಬ ಆರೋಪ ಕೇಳಿಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ