Belagavi NewsBelgaum NewsKannada NewsKarnataka News

*ಶಿವಾನಂದ ಕೌಜಲಗಿ ನಿಧನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮಾಜಿ ಸಚಿವರೂ, ಮಾಜಿ ಸಂಸದರೂ, ಕೆಎಲ್ಇ ಸಂಸ್ಥೆಯ ಮಾಜಿ ಅಧ್ಯಕ್ಷರೂ ಆಗಿದ್ದ ಶಿವಾನಂದ ಎಚ್.ಕೌಜಲಗಿ ನಿಧನರಾಗಿದ್ದಾರೆ.

ರಾಜ್ಯದ ಲೋಕೋಪಯೋಗಿ ಸಚಿವರಾಗಿ, ಲೋಕಸಭಾ ಸದಸ್ಯರಾಗಿ, ಹಲವಾರು ಪ್ರತಿಷ್ಠಿತ ಸಂಸ್ಥೆಗಳ ಪದಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದ ಅವರು, ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

ಪುತ್ರರಾದ ಶಾಸಕ ಮಹಾಂತೇಶ ಕೌಜಲಗಿ, ಕಾಂಗ್ರೆಸ್ ಮುಖಂಡ ಬಸವರಾಜ ಕೌಜಲಗಿ ಹಾಗೂ ಪತ್ನಿಯನ್ನು ಅವರು ಅಗಲಿದ್ದಾರೆ. ಅವರ ಅಂತ್ಯಕ್ರಿಯೆ ಶನಿವಾರ ಬೆಳಗ್ಗೆ ಬೈಲಹೊಂಗಲದ ಆನಿಗೋಳ ರಸ್ತೆಯ ರುದ್ರಭೂಮಿಯಲ್ಲಿ ನಡೆಯಲಿದೆ.

ಶಿವಾನಂದ ಕೌಜಲಗಿ ನಿಧನಕ್ಕೆ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಕೆಎಲ್ಇ ಸಂಸ್ಥೆಯ ಗೌರವಾಧ್ಯಕ್ಷ ಡಾ.ಪ್ರಭಾಕರ ಕೋರೆ ಶೋಕ ವ್ಯಕ್ತಪಡಿಸಿದ್ದಾರೆ.

ರಾಜಕಾರಣ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಮಾನವಾದ ಸೇವೆ ಸಲ್ಲಿಸಿದವರು ಶಿವಾನಂದ ಕೌಜಲಗಿ. ಪ್ರತಿಷ್ಠಿತ ಕೆ.ಎಲ್.ಇ ಶಿಕ್ಷಣ ಸಂಸ್ಥೆಯನ್ನು ಬೆಳೆಸಿದವರಲ್ಲಿ ಪ್ರಮುಖರು.
ಬೆಳಗಾವಿ ಜಿಲ್ಲೆಯ ಬೈಲಹೊಂಗಲದವರಾಗಿದ್ದ ಶಿವಾನಂದ ಕೌಜಲಗಿ ಅವರ ಬಿ.ಕಾಂ ಪದವೀಧರರು. ಕಾನೂನು ಪದವಿಯನ್ನೂ ಪಡೆದವರು. ಶಿಕ್ಷಣದಷ್ಟೇ ರಾಜಕಾರಣದಲ್ಲೂ ಆಸಕ್ತಿ ವಹಿಸಿದವರು. ಬೈಲಹೊಂಗಲ ವಿಧಾನಸಭಾ ಕ್ಷೇತ್ರವನ್ನು ಸತತವಾಗಿ ಪ್ರತಿನಿಧಿಸಿದವರು. ಲೋಕೋಪಯೋಗಿ ಸಚಿವರಾಗಿ , ಸಂಸದರಾಗಿ ಜನಸೇವೆ ಮಾಡಿದವರು. ಅಂತೆಯೇ ಕೆ.ಎಲ್.ಇ. ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ವಿವಿಧ ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿದವರು. ಪ್ರಸ್ತುತ ಕೆ.ಎಲ್.ಇ. ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿ ಸಂಸ್ಥೆಯ ಉನ್ನತಿಗಾಗಿ ಶ್ರಮಿಸಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button