*ಸಚಿವ ಶಿವಾನಂದ ಪಾಟೀಲ್ ರಿಂದ ರೈತರಿಗೆ ಅವಮಾನ: ಆರೋಪ*
ಸಾಲ ಮನ್ನಾ ಆಗುತ್ತೆ ಅಂತ ಪದೇ ಪದೇ ಬರಗಾಲ ಬರಲಿ ಎಂದು ರೈತರು ಆಶಿಸುತ್ತಾರೆ ಎಂದ ಸಚಿವ
ಪ್ರಗತಿವಾಹಿನಿ ಸುದ್ದಿ; ಬೆರಗಾವಿ: ಸಚಿವ ಶಿವಾನಂದ ಪಾಟೀಲ್ ರೈತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು, ರೈತ ಮುಖಂಡರು, ವಿಪಕ್ಷ ನಾಯಕರು ಸಚಿವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಮಾತನಾಡಿದ ಸಚಿವ ಶಿವಾನಂದ ಪಾಟೀಲ್, ಸಾಲಮನ್ನಾ ಆಗುತ್ತೆ ಎಂದು ಪದೇ ಪದೇ ಬರಗಾಲ ಬರಲಿ ಎಂದು ರೈತರಿಗೆ ಆಸೆ ಇರುತ್ತದೆ. ಕೃಷ್ಣಾನದಿ ನೀರು ಪುಕ್ಸಟ್ಟೆ ಇದೆ, ಕರೆಂಟ್ ಕೂಡ ಪುಕ್ಸಟ್ಟೆ ಇದೆ. ಬಹಳಷ್ಟು ಮುಖ್ಯಮಂತ್ರಿಗಳು ಬಿತ್ತನೆ ಬೀಜ ಕೊಟ್ಟರು, ಗೊಬ್ಬರನೂ ಕೊಟ್ಟರು. ಬರಗಾಲ ಬಂದರೆ ರೈತರು ಸಾಲ ಮನ್ನಾ ನಿರೀಕ್ಷೆ ಇಟ್ಟುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.
ಆದರೆ ಸರ್ಕಾರ ಸಂಕಷ್ಟದಲ್ಲಿದ್ದಾಗ ರೈತರ ಸಾಲ ಮನ್ನಾ ಕಷ್ಟ ಸಾಧ್ಯ. ಕುಡಿದು ಕುಡಿದು ಸತ್ತರೂ, ಹೃದಯಾಘಾತದಿಂದ ಸತ್ತರೂ ಆತ್ಮಹತ್ಯೆ ಅಂತ ದೂರು ಕೊಟ್ಟರೆ ಪರಿಹಾರ ಸಿಗುತ್ತೆ ಎನ್ನುವ ದುರಾಸೆ ಸಂಬಂಧಿಕರದ್ದು, ರೈತರು ಇಂದಿನಿಂದ ಅಲ್ಲ ಹಿಂದಿನಿಂದಲೂ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ರೈತರ ಬಗ್ಗೆ ಹಗುರವಾಗಿ ಸಚಿವರು ಮಾತನಾಡಿದ್ದಾರೆ.
ಸಚಿವ ಶಿವಾನಂದ್ ಪಾಟೀಲ್ ಅವರ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದ್ದು, ರೈತ ಮುಖಂಡರು, ವಿಪಕ್ಷ ನಾಯಕ ಆರ್.ಅಶೋಕ್ ತೀವ್ರವಾಗಿ ಖಂಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ