Politics

*ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನಟ ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ತೆರಳಿ ಅವರ ಆರೋಗ್ಯ ವಿಚಾರಿಸಿದರು.

ಕ್ಯಾನ್ಸರ್ ನಿಂದ ಬಳಲುತ್ತಿದ್ದ ನತ ಶಿವರಾಜ್ ಕುಮಾರ್, ಅಮೆರಿಕಾದಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದು, ಬೆಂಗಳೂರಿಗೆ ವಾಪಾಸ್ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ಶಿವರಾಜಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆಯ ನಂತರ ಹಿಂತಿರುಗಿ ಬಂದ ನಂತರ ಅವರ ಆರೋಗ್ಯವನ್ನು ವಿಚಾರಿಸಲು ಇಂದು ಭೇಟಿ ಮಾಡಿದ್ದೇನೆ. ಅವರ ಶಸ್ತ್ರ ಚಿಕಿತ್ಸೆಯ ಮರುದಿನವೇ ಅವರಿಗೆ ಕರೆಯಾಡಿ ಆರೋಗ್ಯ ವಿಚಾರಿಸಿದಾಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ತೊಂದರೆ ಇಲ್ಲ ಎಂದು ತಿಳಿಸಿದ್ದರು.

ಮುಂದಿನ ತಿಂಗಳಿನಿಂದ ಚಿತ್ರೀಕರಣಕ್ಕೆ ತೆರಳುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ತಿಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button