
ಪ್ರಗತಿವಾಹಿನಿ ಸುದ್ದಿ: ಮೋದಿ ಮೋದಿ ಎಂದು ಘೋಷಣೆ ಕೂಗುವ ಯುವಕರ ಕಪಾಳಕ್ಕೆ ಹೊಡೆಯಿರಿ ಎಂಬ ಹೇಳಿಕೆ ನೀಡುವ ಮೂಲಕ ವಿವಾದ ಸೃಷ್ಟಿಸಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇನ್ನು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಸಚಿವ ಶಿವರಾಜ್ ತಂಗಡಗಿ, ಉತ್ತರ ಕರ್ನಾಟಕ ಭಾಷೆಯಲ್ಲಿ ನಾನು ಭಾಷಣ ಮಾಡಿದ್ದೆ. ಬಿಜೆಪಿಯವರು ಯುವಕರ ದಾರಿ ತಪ್ಪಿಸುತ್ತಿದ್ದಾರೆ ಎಂದು ಹೇಳಿದ್ದೆ ಎಂದಿದ್ದಾರೆ.
ಸಂಸ್ಕಾರದ ಬಗ್ಗೆ ನನಗೆ ಗೊತ್ತು. ಬಿಜೆಪಿಯವರ ಭಾಷೆಯಲ್ಲಿ ಉತ್ತರ ಕೊಡುವುದೂ ನನಗೆ ಗೊತ್ತು. ಬಿಜೆಪಿ ಯುವಕರ ದಾರಿ ತಪ್ಪಿಸುತ್ತಿದೆ ಎಂಬ ಕಾರಣಕ್ಕೆ ನಾನು ಕಳಕಳಿ ಮಾತುಗಳನ್ನು ಆಡಿದ್ದೇನೆ ಅಷ್ಟೇ ಎಂದು ಸಮರ್ಥಿಸಿಕೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ