ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ಅನ್ನದಾತರು ಕರೆ ನೀದಿರುವ ಭಾರತ್ ಬಂದ್ ಗೆ ಬೆಂಬಲ ಸೂಚಿಸಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ರೈತರ ಹೋರಾಟಕ್ಕೆ ತಮ್ಮ ಬೆಂಬಲವಿದೆ ಎಂದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ನಟ ಶಿವರಾಜ್ ಕುಮಾರ್, ರೈತ ದೇಶದ ಬೆನ್ನೆಲುಬು. ರೈತ ಇದ್ರೇನೇ ದೇಶ…ಅವರ ಕಷ್ಟಕ್ಕೆ ನಾವು ಯಾವಾಗಲೂ ಜೊತೆ ಇರುತ್ತೇವೆ. ರೈತರ ಹೋರಾಟಕ್ಕೆ ನಮ್ಮ ಬೆಂಬಲವಿದೆ ಎಂದಿದ್ದಾರೆ.
ಈ ಮೂಲಕ ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಶಿವರಾಜ್ ಕುಮಾರ್ ಬೆಂಬಲ ವ್ಯಕ್ತಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ