ಪ್ರಗತಿವಾಹಿನಿ ಸುದ್ದಿ; ಶಿರಸಿ: ಉಂಚಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಮುಂಡಿಗೆಹಳ್ಳ ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಮಹಿಳೆ ಯಶೋದಾ ಬಂಗಾರ ಗೌಡ ಮೃತಪಟ್ಟ ಅಹಿತಕರ ಘಟನೆ ನಿನ್ನೆ ನಡೆದಿದ್ದು ಕಾರ್ಮಿಕ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಭೇಟಿ ನೀಡಿ 16 ಗಂಟೆಗಳ ಒಳಗಾಗಿ ಪರಿಹಾರಧನ ವಿತರಿಸಿದ್ದಾರೆ.
ಸಚಿವ ಶಿವರಾಮ ಹೆಬ್ಬಾರ್ ಅವರು ಘಟನೆ ನಡೆದ 16 ಗಂಟೆಗಳ ಒಳಗಾಗಿ ಖುದ್ದಾಗಿ ತಾವೇ ಮೃತರ ಮನೆಗೆ ಭೇಟಿ ನೀಡಿ ಸುಮಾರು 5 ಲಕ್ಷ ರೂಪಾಯಿ ಮೊತ್ತದ ಪರಿಹಾರ ಧನದ ಚೆಕ್ ಅನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದರು.
ಗುಡ್ನಾಪುರ ಗ್ರಾಮ ಪಂಚಾಯತ ವ್ಯಾಪ್ತಿಯ ಮುಂಡಿಗೆಹಳ್ಳ ಗ್ರಾಮದಲ್ಲಿ ನಿನ್ನೆ ಆಕಸ್ಮಿಕವಾಗಿ ಮನೆ ಗೋಡೆ ಕುಸಿದು ಮಹಿಳೆ ಮೃತಪಟ್ಟಿದ್ದರು.
ಅನ್ಯ ಕಾರ್ಯಕ್ರಮವನ್ನು ಅರ್ಧಕ್ಕೆ ಮೊಟಕುಗೊಳಿಸಿ ಸಚಿವ ಶಿವರಾಮ ಹೆಬ್ಬಾರ್ ಅವರು ಘಟನೆ ನಡೆದ ಸ್ಥಳಕ್ಕೆ ತಕ್ಷಣ ಭೇಟಿ ನೀಡಿ ಸಾಂತ್ವನ ಹೇಳಿದ್ದರು. ಅಂತ್ಯ ಸಂಸ್ಕಾರಕ್ಕೆ ಧನಸಹಾಯ ಮಾಡಿದ್ದರು. ಅಲ್ಲದೇ 48 ಗಂಟೆಗಳ ಒಳಗಾಗಿ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು.
ಇದೀಗ ಖುದ್ದಾಗಿ ಸಚಿವರೇ ಮೃತ ಮಹಿಳೆ ಕುಟುಂಬಕ್ಕೆ ಪರಿಹಾರ ಧನದ ಚೆಕ್ ವಿತರಿಸಿ, ಕುಟುಂಬಕ್ಕೆ ಮತ್ತೊಮ್ಮೆ ಸಾಂತ್ವನ ಹೇಳಿದ್ದಾರೆ.
ಚಲಿಸುತ್ತಿದ್ದ ಬಸ್ ನಲ್ಲಿ ಬಾಂಬ್ ಸ್ಫೋಟ; 13 ಜನರು ಸಾವು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ