Latest

ಮಾಜಿ ಸಿಎಂ ಸಿದ್ದರಾಮಯ್ಯಗೆ ಸಚಿವ ಹೆಬ್ಬಾರ್ ತಿರುಗೇಟು

ಪ್ರಗತಿವಾಹಿನಿ ಸುದ್ದಿ; ಹಾಸನ: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯಗೆ ತಿರುಗೇಟು ನೀಡಿರುವ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ವಿರೋಧ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಸರ್ಕಾರದ ಮೇಲೆ ಆರೋಪ ಮಾಡುತ್ತಾರೆ. ನಾವು ಎಲ್ಲದ್ದಕ್ಕೂ ದಾಖಲೆ ಕೊಡುತ್ತೇವೆ ಎಂದು ಹೇಳಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಕೇಳಿದ ಎಲ್ಲ ದಾಖಲೆಗಳನ್ನು ನಾವು ಕೊಡುತ್ತೇವೆ. ಅನಗತ್ಯವಾಗಿ ಆರೋಪ ಮಾಡುವುದನ್ನು ನಿಲ್ಲಿಸಲಿ ಎಂದರು.

ಇದೇ ವೇಳೆ ಬೆಂಗಳೂರಿನಲ್ಲಿ ಕೊರೊನಾದಿಂದ ಏನೋ ಆಗಿಬಿಡುತ್ತೆ ಎಂದು ಮಾಧ್ಯಮಗಳಲ್ಲಿ ತೋರಿಸುತ್ತಿದ್ದಾರೆ. ಅದನ್ನು ನೋಡಿದ ನಿಮಗೆಲ್ಲ ಬೆಂಗಳೂರಿನಲ್ಲಿದ್ದವರ ನಿಮ್ಮ ಸಂಬಂಧಿಕರ ಬಗ್ಗೆ ಭಯ ಆಗುತ್ತೆ. ಅಂತಹ ಯಾವುದೇ ಭಯಪಡುವ ವಾತಾವರಣ ಬೆಂಗಳೂರಿನಲ್ಲಿ ಇಲ್ಲ. ಬೆಂಗಳೂರಿನಲ್ಲಿ ವ್ಯವಸ್ಥಿತವಾದ ಕೆಲಸ ಮಾಡುತ್ತಿದ್ದಾರೆ. ಕೋವಿಡ್ ಬರುತ್ತೆ ಎಂಬುದು ಗೊತ್ತಿಲ್ಲದ ಕಾರಣ ಸಿದ್ಧತೆ ಮಾಡಿಕೊಳ್ಳಲು ವಿಳಂಬವಾಗಿತ್ತು. ಈಗ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಸಮರ್ಥವಾಗಿ ಕೊರೊನಾಗೆ ಕಡಿವಾಣ ಹಾಕುವ ಪ್ರಯತ್ನ ಆಗಿದೆ. ಜೊತೆಗೆ ಕೋವಿಡ್-19 ಜೊತೆಗೆ ನಾವು ಬದುಕುವುದನ್ನು ಅಭ್ಯಾಸ ಮಾಡಿಕೊಳ್ಳಬೇಕಿದೆ ಎಂದು ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button