Latest

ಶಿವಸೇನೆ ನಾಯಕನ ಮೇಲೆ ಗುಂಡಿನ ದಾಳಿ; ಹಾಡಹಗಲೇ ಬರ್ಬರ ಹತ್ಯೆ

ಪ್ರಗತಿವಾಹಿನಿ ಸುದ್ದಿ; ಅಮೃತಸರ: ಶಿವಸೇನೆ ನಾಯಕ ಸುಧೀರ್ ಸೂರಿ ಅವರನ್ನು ದುಷ್ಕರ್ಮಿಗಳು ಗುಂಡಿಟ್ಟು ಹೈತ್ಯೆ ಮಾಡಿರುವ ಘಟನೆ ಪಂಜಾಬ್ ನಲ್ಲಿ ನಡೆದಿದೆ.

ಪಂಜಾಬ್ ನ ಅಮೃತಸರದಲ್ಲಿ ಪ್ರತಿಭಟನೆ ವೇಳೆ ಹಾಡಹಗಲೇ ಸುಧೀರ್ ಸೂರಿ ಮೇಲೆ ಗುಂಡಿನ ದಾಳಿ ನಡೆದಿದ್ದು, ಗುಂಡೇಟಿಗೆ ಶಿವಸೇನೆ ನಾಯಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ನಡುರಸ್ತೆಯಲ್ಲಿಯೇ ಈ ಘಟನೆ ನಡೆದಿದ್ದು, ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತರು ಏಕಾಏಕಿ ಸುಧೀರ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಸುಧೀರ್ ಸೂರಿ ಶಿವಸೇನೆಯಲ್ಲಿ ಉದ್ಧವ್ ಠಾಕ್ರೆ ಬಣದಲ್ಲಿ ಗುರುತಿಸಿಕೊಂಡಿದ್ದ ಪ್ರಮುಖ ನಾಯಕರಾಗಿದ್ದರು.

ವಿದ್ಯುತ್ ತಂತಿ ತಗುಲಿ ಅಣ್ಣ-ತಮ್ಮ ದುರ್ಮರಣ

https://pragati.taskdun.com/latest/electric-shockbrothersdeathkolara/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button