ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರದ ಶಿವಸೇನಾ ನಾಯಕಿಯನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್, ಲ್ಯಾಂಡಿಂಗ್ ವೇಳೆ ಪತನಗೊಂಡಿದ್ದು ಅದೃಷ್ಟವಶಾತ್ ಹೆಲಿಕಾಪ್ಟರ್ ನಲ್ಲಿದ್ದವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ.
ಉದ್ಧವ್ ಠಾಕ್ರೆ ಬಣದ ಶಿವಸೇನಾ ನಾಯಕಿ ಸುಷ್ಮಾ ಅವರನ್ನು ಸಭೆಯೊಂದರಲ್ಲಿ ಪಾಲ್ಗೊಳ್ಳಲು ಕರೆದೊಯ್ಯುವ ವೇಳೆ ರಾಯಗಢ ಜಿಲ್ಲೆಯಲ್ಲಿ ಹೆಲಿಕಾಪ್ಟರ್ ಲ್ಯಾಂಡ್ ಆಗುವಾಗ ಈ ಅವಘಡ ಸಂಭವಿಸಿದೆ. ಇದರ ಪರಿಣಾಮ ಹೆಲಿಕಾಪ್ಟರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಅಪಘಾತದಲ್ಲಿ ಪೈಲೆಟ್ ಸೇರಿದಂತೆ ಹೆಲಿಕ್ಯಾಪ್ಟರ್ ನಲ್ಲಿದ್ದ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ