Wanted Tailor2
Cancer Hospital 2
Bottom Add. 3

*ಶಿವಸೇನೆ ಪುಂಡಾಟ; ಬೆಳಗಾವಿಗೆ ನುಗ್ಗಲು ಯತ್ನಿಸಿದ ಕಾರ್ಯಕರ್ತರಿಗೆ ಪೊಲೀಸರಿಂದ ತಡೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಗಡಿ ಪ್ರದೇಶದಲ್ಲಿ ಶಿವಸೇನೆ ಕಾರ್ಯಕರ್ತರು ಮತ್ತೆ ಪುಂಡಾಟ ಮೆರೆದಿದ್ದಾರೆ. ಬೆಳಗಾವಿಗೆ ನುಗ್ಗಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ.

ಶಿವಸೇನೆಯ ಉದ್ಧವ್ ಠಾಕ್ರೆ ಬಣದ 50ಕ್ಕೂ ಹೆಚ್ಚು ಕಾರ್ಯಕರ್ತರು ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಪುಂಡಾಟ ಮೆರೆದಿದ್ದಾರೆ. ಬೆಳಗಾವಿ ಗಡಿಯೊಳಗೆ ನುಗ್ಗಲು ಕೊಲ್ಲಾಪುರ ಶಿವಸೇನೆ ಜಿಲ್ಲಾಧ್ಯಕ್ಷ ವಿಜಯ್ ದೇವಣೆ ನೇತೃತ್ವದ ಕಾರ್ಯಕರ್ತರು ಯತ್ನಿಸಿದ್ದಾರೆ.

ಪೊಲೀಸರು ಹಾಗೂ ಶಿವಸೇನೆ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಗಡಿಯಲ್ಲಿ ಪೊಲೀಸರು ಕಾರ್ಯಕರ್ತರಿಗೆ ತಡೆಯೊಡ್ಡಿದ್ದು, ಬೆಳಗಾವಿ ಪ್ರವೇಶಕ್ಕೆ ಅವಕಾಶ ನೀಡಿಲ್ಲ.


Bottom Add3
Bottom Ad 2

You cannot copy content of this page