Belagavi NewsBelgaum NewsCrimeKannada NewsKarnataka NewsNational

*ಬೆಳಗಾವಿಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ತೆಲಂಗಾಣ ಮೂಲದ ಯುವತಿಯ ರಕ್ಷಣೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವೇಶ್ಯಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿರುವ ಬೆಳಗಾವಿ ಪೊಲೀಸರು, ಆರೋಪಿಯನ್ನು ಬಂಧಿಸಿ ಯುವತಿಯನ್ನು ರಕ್ಷಣೆ ಮಾಡಿದ್ದಾರೆ.

ಬೆಳಗಾವಿಯ ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಅಪಾರ್ಟೆಂಟ್‌ ಒಂದರಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ದಂಧೆ ನಡೆಸುತ್ತಿದ್ದ ಮಹಿಳೆಯನ್ನು ಬಂಧಿಸಿ ತೆಲಂಗಾಣ ಮೂಲದ ಯುವತಿಯನ್ನು ರಕ್ಷಿಸಿದ್ದಾರೆ.

Home add -Advt

ಆಯೇಶಾ ಶಬ್ಬಿರ್ ಶೇಖ್ ಅಲಿಯಾಸ್ ರೇಷ್ಮಾ ಅಂಕಲೆವಾಲೆ (31) ಬಂಧಿತ ಆರೋಪಿ.‌ ಆರೋಪಿ ಮಹಿಳೆ ಅಪಾರ್ಟೆಂಟ್‌ನಲ್ಲಿ ಮನೆ ಬಾಡಿಗೆಗೆ ಪಡೆದು, ತೆಲಂಗಾಣ ರಾಜ್ಯದ ಯುವತಿಯನ್ನು ಅಲ್ಲೇ ಇರಿಸಿಕೊಂಡು ಗಿರಾಕಿಗಳನ್ನು ಮನೆಗೆ ಕರೆಯಿಸಿ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದಳು ಎನ್ನಲಾಗಿದೆ.

ಈ ಕುರಿತು ದೊರೆತ ಮಾಹಿತಿ ಆಧರಿಸಿ ಸಿಪಿಐ ಪರಶುರಾಮ ಪೂಜೇರಿ ನೇತೃತ್ವದಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ಒಳಗೊಂಡ ವಿಶೇಷ ತಂಡ ಕಾರ್ಯಾಚರಣೆ ನಡೆಸಿತು. ದಾಳಿ ವೇಳೆ ಯುವತಿಯನ್ನು ರಕ್ಷಿಸಿ ಆರೋಪಿತೆಯನ್ನು ವಶಕ್ಕೆ ಪಡೆಯಲಾಗಿದೆ.

ಈ ಸಂಬಂಧ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಅನೈತಿಕ ಮಾನವ ಸಾಗಣೆ ತಡೆ ಕಾಯ್ದೆ (PIT Act)-1956ರ ಕಲಂ 3, 4 ಹಾಗೂ 5ರಅಡಿಯಲ್ಲಿ ಪ್ರಕರಣ ದಾಖಲಿಸಿ ಹೆಚ್ಚಿಮ ತನಿಖೆ ಕೈಗೊಳ್ಳಲಾಗಿದೆ.

Related Articles

Back to top button