
ಪ್ರಗತಿವಾಹಿನಿ ಸುದ್ದಿ; ಮುಂಬೈ: ಶಿವಸೇನೆ ಕಾರ್ಯಕರ್ತರ ಪುಂಡಾಟ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಾರಿನಲ್ಲಿ ತೆರಳುತ್ತಿದ್ದ ಶಿವಸೇನೆ ಕಾರ್ಯಕರ್ತರು ಗನ್ ಹಿಡಿದು ತಮಗೆ ದಾರಿ ಬಿಡುವಂತೆ ಜನರನ್ನು ಬೆದರಿಸಿದ ಘಟನೆ ಮುಂಬೈ ಪುಣೆ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ನಡೆದಿದೆ.
ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಶಿವಸೇನೆ ಕೃತ್ಯಕ್ಕೆ ಆಕ್ರೋಶ ವ್ಯಕ್ತವಾಗಿದೆ. ಕಾರಿನಲ್ಲಿ ತೆರಳುತ್ತಿದ್ದ ಶಿವಸೇನೆ ಕಾರ್ಯಕರ್ತರು ರಿವಾಲ್ವರ್ ತೋರಿಸಿ ಬೆದರಿಕೆ ಹಾಕಿದ್ದಾರೆ.
ವಿಡಿಯೋ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಹಾರಾಷ್ಟ್ರ ಸರ್ಕಾರದ ವಿರುದ್ಧ ವಿಪಕ್ಷಗಳು ವಾಗ್ದಾಳಿ ನಡೆಸಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕಿಡಿಕಾರಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ