Election NewsKannada NewsKarnataka NewsPolitics

ಶಿವರಾಂ ಹೆಬ್ಬಾರ್ ಬೆಂಬಲಿಗರು ಸಾಮೂಹಿಕವಾಗಿ ಕಾಂಗ್ರೆಸ್ ಸೇರ್ಪಡೆ

ಪ್ರಗತಿವಾಹಿನಿ ಸುದ್ದಿ, ಯಲ್ಲಾಪುರ – ಕೆನರಾ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬಿಜೆಪಿ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿವೆ. ಚುನಾವಣೆಗೆ ಇನ್ನೂ ಕೆಲವೇ ದಿನಗಳು ಬಾಕಿ ಇರುವಾಗ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. 

ಕೆನರಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ. ಅಂಜಲಿ ನಿಂಬಾಳ್ಕರ್  ಸ್ಪರ್ಧೆ ಮಾಡಿದರೆ ಬಿಜೆಪಿ ಅಭ್ಯರ್ಥಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸ್ಪರ್ಧೆ ಮಾಡುತ್ತಿದ್ದಾರೆ. ಆದರೆ ಚುನಾವಣೆ ಮುಂಚೆಯೆ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ.‌

Home add -Advt

ಮಾಜಿ ಸಚಿವ ಶಿವರಾಂ ಹೆಬ್ಬಾರ್ ಅವರ 300 ಕ್ಕೂ ಹೆಚ್ಚು ಬೆಂಬಲಿಗರು ಸಾಮೂಹಿಕವಾಗಿ ಗುರುವಾರ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಲೊಯೊಲಾ ವಿಕಾಸ ಕೇಂದ್ರದ ಸಭಾಭವನದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಕೆಪಿಸಿಸಿ ಉಪಾಧ್ಯಕ್ಷ ಐವನ್‌ ಡಿಸೊಜಾ ಮತ್ತು ಜಿಲ್ಲಾ ಉಸ್ತುವಾರಿ ಮಂಕಾಳು ವೈದ್ಯರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದಲ್ಲಿ ಶಿರಸಿ ಶಾಸಕ ಭೀಮಣ್ಣ ನಾಯಕ, ಕಾರವಾರ ಶಾಸಕ ಸತೀಶ್ ಸೈಲ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಲಿದ್ದಾರೆ.

Related Articles

Back to top button