ಪ್ರಗತಿವಾಹಿನಿ ಸುದ್ದಿ, ಮುಂಬೈ: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹಾಗೂ ಮಾಜಿ ಸಿಎಂ ಉದ್ಧವ್ ಠಾಕ್ರೆ ನಡುವಿನ ತಿಕ್ಕಾಟದ ಪರಿಣಾಮ ಶಿವಸೇನೆ ಹೆಸರು, ಚಿಹ್ನೆಯನ್ನು ಚುನಾವಣಾ ಆಯೋಗ ಮುಟ್ಟುಗೋಲು ಹಾಕಿದೆ.
ಈ ಕುರಿತು ಚುನಾವಣಾ ಆಯೋಗ ಮಧ್ಯಂತರ ಆದೇಶ ನೀಡಿದ್ದು, ಅಂಧೇರಿ ಪೂರ್ವ ಉಪಚುನಾವಣೆಗೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಬಳಸಲು ಅಂತಿಮ ಆದೇಶ ನೀಡುವವರೆಗೆ ಈಗಿರುವ ಚಿಹ್ನೆ ಬಳಕೆಗೆ ಅನುಮತಿಸದಿರಲು ಚುನಾವಣಾ ಆಯೋಗ ನಿರ್ಧರಿಸಿದೆ.
ಬಣದವರು ತಾವು ‘ನೈಜ’ ಶಿವಸೇನೆಯನ್ನು ಪ್ರತಿನಿಧಿಸುತ್ತೇವೆ ಎಂದು ಹೇಳಿಕೊಂಡಿದ್ದು, ಪಕ್ಷದ ಹೆಸರು ಮತ್ತು ಬಿಲ್ಲು ಮತ್ತು ಬಾಣ ಚಿಹ್ನೆಯ ವಿಶೇಷ ಬಳಕೆಗೆ ಕಳೆದ ಜೂನ್ ನಿಂದಲೇ ಹಕ್ಕು ಸಾಧಿಸುತ್ತ ಬಂದಿದ್ದಾರೆ.
ಮಹಾರಾಷ್ಟ್ರದ ಅಂಧೇರಿ ಪೂರ್ವ ವಿಧಾನಸಭಾ ಕ್ಷೇತ್ರ ಸೇರಿದಂತೆ ಈ ವಾರ ಉಪಚುನಾವಣೆ ಘೋಷಣೆಯಾಗಿರುವುದರಿಂದ ಈ ವಿಷಯದಲ್ಲಿ ನಿರ್ಧಾರ ಕೈಗೊಳ್ಳುವ ತುರ್ತು ಅಗತ್ಯವಿದೆ ಎಂದು ಚುನಾವಣಾ ಆಯೋಗ ತನ್ನ ಆದೇಶದಲ್ಲಿ ಹೇಳಿದೆ.
ನವೆಂಬರ್ 3 ರಂದು ನಡೆಯಲಿರುವ ಉಪಚುನಾವಣೆಗೆ ಶುಕ್ರವಾರ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಅಕ್ಟೋಬರ್ 14 ರವರೆಗೆ ನಡೆಯಲಿದೆ.
ಪುನೀತ್ ರಾಜ್ ಕುಮಾರ್ ಕನಸಿನ ಪ್ರಾಜೆಕ್ಟ್ ‘ಗಂಧದಗುಡಿ’ ಟ್ರೇಲರ್ ಬಿಡುಗಡೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ