
ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಜೊಲ್ಲೆ ಎಜ್ಯುಕೇಶನ್ ಸೊಸಾಯಟಿಯ ಶಿವಶಂಕರ ಜೊಲ್ಲೆ ಕನ್ನಡ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಭಾರತದ ಸಂವಿಧಾನ ದಿನವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಅತಿಥಿಗಳಾಗಿ ಆಗಮಿಸಿದ ಆಶಾಜ್ಯೋತಿ ವಿಶೇಷ ಮಕ್ಕಳ ವಸತಿ ಶಾಲೆಯ ಅಧ್ಯಕ್ಷರುಗಳಾದ ಜ್ಯೋತಿಪ್ರಸಾದ ಜೊಲ್ಲೆ ಸಂವಿಧಾನ ಶಿಲ್ಪಿ ಡಾ|| ಬಿ.ಆರ್.ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಸಂವಿಧಾನ ಪ್ರಸ್ತಾವಣೆ ಹಾಗೂ ಹಕ್ಕು ಮತ್ತು ಕರ್ತವ್ಯಗಳ ಕುರಿತು ವಿದ್ಯಾರ್ಥಿಗಳಿಂದ ಭಾಷಣಗಳು ಜರುಗಿದವು.
ಮುಖ್ಯೋಪಾಧ್ಯಾಯರಾದ ವ್ಹಿ.ಆರ್.ಭಿವಸೆ ಮಾತನಾಡಿ ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತವು 1949 ನವೆಂಬರ್ 26ರಂದು ಸಂವಿಧಾನವನ್ನು ಅಂಗೀಕರಿಸಿತು. ಡಾ|| ಬಿ.ಆರ್.ಅಂಬೇಡ್ಕರವರು ಸಂವಿಧಾನ ರಚನೆಯಲ್ಲಿ ನೀಡಿದ ಕೊಡುಗೆಯನ್ನು ಸ್ಮರಿಸಿದರು.ನಮ್ಮ ದೇಶದ ಸಂವಿಧಾನ ಬೃಹತ ಹಾಗೂ ಲಿಖಿತ ಸಂವಿಧಾನವಾಗಿದೆ. ಸಂವಿಧಾನ ನೀಡಿದ ಕಾನೂನು ಕಟ್ಟಳೆಗಳ ಅಡಿಯಲ್ಲಿ ನಾವೂ ನಡಯೋಣ ಹಾಗೂ ದೇಶವನ್ನು ಪ್ರಗತಿಯತ್ತ ಮುನ್ನಡೆಸೋಣ ಎಂದರು. ಶಾಲೆಯ ಮುಖ್ಯೋಪಾಧ್ಯಾಯನಿಯರಾದ ಎಸ್.ಜಿ.ಕಾಮತ ಹಾಗೂ ಸಹಶಿಕ್ಷಕರು ಹಾಗೂ ಸಿಬ್ಬಂಧಿ ವರ್ಗದವರು ಉಪಸ್ಥಿತರಿದ್ದರು.ವಿದ್ಯಾರ್ಥಿಯಾದ ಕು.ಆದಿತ್ಯಾ ಬಾಳಿಕಾಯಿ ನಿರೂಪಿಸಿ, ವಂದಿಸಿದನು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ