*ಪಠ್ಯದ ಜೊತೆಗೆ ಮಕ್ಕಳು ಕ್ರೀಡಾ ಮನೋಭಾವನೆಯನ್ನು ಹೊಂದುವುದು ಅವಶ್ಯಕ; ಶಾಸಕಿ ಶಶಿಕಲಾ ಜೊಲ್ಲೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಜೊಲ್ಲೆ ಎಜ್ಯುಕೇಶನ್ ಸೊಸಾಯಟಿಯ ಅಂಗ ಸಂಸ್ಥೆಯಾದ ಶಿವಶಂಕರ ಜೊಲ್ಲೆಕನ್ನಡ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ 2023-24 ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ ಹಾಗೂ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸಹಸಂಸ್ಥಾಪಕರಾದ ಶಾಸಕಿ ಶಶಿಕಲಾ ಅಣ್ಣಾಸಾಹೇಬ ಜೊಲ್ಲೆ ವಹಿಸಿದ್ದರು. ಇವರು ದೀಪ ಪ್ರಜ್ವಲನೆ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಕ್ಕಳಿಗೆ ಮನಸ್ಸಿದ್ದರೆ ಮಾರ್ಗ ಎಂಬ ಉಕ್ತಿಯಂತೆ ವಿದ್ಯಾರ್ಥಿಗಳೆಲ್ಲರೂ ಸಂಸ್ಕಾರಯುತವಾದಂತಹ ಶಿಕ್ಷಣವನ್ನು ಗಮನದಲ್ಲಿಟ್ಟುಕೊಂಡು ಕಲಿಯುವುದು ಅವಶ್ಯಕ. ಈ ನಿಟ್ಟಿನಡಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಅವಶ್ಯಕವಾದರೆ, ಸದೃಢವಾದ ದೇಹದಲ್ಲಿ ಸದೃಢವಾದ ಮನಸ್ಸು ಇರುತ್ತದೆ ಎಂಬುದಕ್ಕೆ ಪೂರಕವಾಗಿ ಪಠ್ಯದ ಜೊತೆಗೆ ಮಕ್ಕಳು ಕ್ರೀಡಾ ಮನೋಭಾವನೆಯನ್ನು ಹೊಂದುವುದು ಅವಶ್ಯವೆಂದು ತಿಳಿಸಿದರು.
ನಮ್ಮ ಸಂಸ್ಥೆಯ ಕನ್ನಡ ಶಾಲೆಯು ಕೆಲವೇ ವಿದ್ಯಾರ್ಥಿಗಳಿಂದ ಪ್ರಾರಂಭವಾಗಿ 930 ವಿದ್ಯಾರ್ಥಿಗಳಿಗೆ ಗ್ರಾಮೀಣಮಟ್ಟದಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವುದು ಸಂತಸ. ನಮ್ಮ ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳು ಇಂದು ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದು ಅತ್ಯಂತ ಖುಷಿ ತಂದಿದೆ ಎಂದು ತಿಳಿಸಿದರು.

ಮುಖ್ಯ ಅಥಿತಿಗಳಾಗಿ ಎಚ್‌ಎಸ್‌ಖಾಡೆ ವಿಷಯ ಪರೀವಿಕ್ಷಕರು, ಉಪನಿರ್ದೇಶಕರ ಕಾರ್ಯಾಲಯ ಚಿಕ್ಕೋಡಿ ಇವರು ವಹಿಸಿ ಮಾತನಾಡಿ ಪ್ರಾಚೀನ ಕಾಲದಲ್ಲಿ ನೀಡುತ್ತಿದ್ದ ಶಿಕ್ಷಣವನ್ನು ಇವತ್ತು ಅನೇಕ ಪಠ್ಯೇತರ ಚಟುವಟಿಕೆಗಳ ಮೂಲಕ ಶಾಲೆಯಲ್ಲಿ ಗುಣಾತ್ಮಕ ಶಿಕ್ಷಣವನ್ನು ನೀಡುವುದು ಅವಶ್ಯಕ ಅಲ್ಲದೇ ಮಕ್ಕಳಿಗೆ ಸಂಘಗಳಲ್ಲಿ ಭಾಗವಹಿಸುವುದರೊಂದಿಗೆ ಸಮಾಜದಲ್ಲಿ ಜವಾಬ್ದಾರಿಯುತ ಪ್ರಜೆಗಳನ್ನಾಗಿ ರೂಪಿಸುವಂತಹ ಶಿಕ್ಷಣವನ್ನು ನೀಡಬೇಕೆಂದು ಮಾರ್ಮಿಕವಾಗಿ ನುಡಿದರು.
ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು, ಶಾಲೆಯ ವಿವಿಧ ವಿಭಾಗಗಳ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಜವಾಬ್ದಾರಿ ಹಂಚಿಕೆಯ ಪದಗ್ರಹಣ ಮಾಡಲಾಯಿತು. ಕಳೆದ ವರ್ಷದ ಎಸ್.ಎಸ್.ಎಲ್.ಸಿ.ಯ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸತ್ಕರಿಸಲಾಯಿತು.
ಶಾಲೆಯ ಮುಖ್ಯೋಪಾಧ್ಯಾಯರಾದ ವ್ಹಿ.ಆರ್.ಭಿವಸೆ ಪ್ರಾಸ್ತಾವಿಕವಾಗಿ ಕಾರ್ಯಕ್ರಮದ ಕುರಿತು ಮಾತನಾಡಿದರು. ಶಾಲೆಯ ಆಡಳಿತ ಮಂಡಳಿಯ ಸದಸ್ಯರುಗಳಾದ ಫೈಮಿದಾದಾಡಿವಾಲೆ, ಸುಜಾತಾಕಬಾಡೆ, ಲತಾ ವಾಳಕೆ, ಮಹಾದೇವಿ ಹುದ್ದಾರ,ಮಹಾದೇವಿ ಡೊಂಗರೆ, ಗಿರೀಜಾ ಪಾಟೀಲ, ಜೊಲ್ಲೆಗ್ರೂಪ್‌ನ ಸಿ.ಇ.ಓಗಳಾದ ವಿವೇಕಾನಂದ ಬಂಕೋಳ್ಳಿ, ಶಾಲೆಯ ಮುಖ್ಯೋಪಾಧ್ಯಾಯರಾದಎಸ್ ಜಿ ಕಾಮತ್, ಎಲ್ಲ ಶಿಕ್ಷಕ ವೃಂದದವರು, ಪಾಲಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕು. ಆಶಾ ಚವ್ಹಾಣ ಸ್ವಾಗತಿಸಿ,ದರ್ಶನ ಅಕ್ಕೋಳೆ ವಂದಿಸಿ, ಪಲ್ಲವಿ ಮಾಳಿ ನಿರೂಪಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ