Latest

*ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ದೂರು ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಳಿಕ ಬೆಂಗಳೂರಿನಲ್ಲಿ ಸುದ್ದಿಗರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಸೋನಿಯಾ ಗಾಂಧಿಯವರು ಹುಬ್ಬಳ್ಳಿಯಲ್ಲಿ ಚುನಾವಣಾ ಪ್ರಚಾರ ಭಾಷಣದ ವೇಳೆ ಕನ್ನಡಿಗರ ಬಗ್ಗೆ ಸಂಶಯ ಬರುವ ರೀತಿ ಮಾತನಾಡಿದ್ದಾರೆ. ಭಾರತದ ಸಾರ್ವಭೌಮತ್ವದ ವಿರುದ್ಧ ಮಾತನಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ವಿರುದ್ಧ ಕ್ರಮಕೈಗೊಳ್ಳುವಂತೆ ಚುನವಣಾ ಆಯೋಗಕ್ಕೆ ದೂರು ನೀಡಿದ್ದಾಗಿ ತಿಳಿಸಿದ್ದಾರೆ.

Home add -Advt

ಸೋನಿಯಾ ಗಾಂಧಿಯವರು ಕನ್ನಡಿಗರ ಬಗ್ಗೆ ಹೀಗೆ ಮಾತನಾಡಲು ಕಾರಣವೇನು? ಉದ್ದೇಶವೇನು ಎಂಬುದನ್ನು ಸ್ಪಷ್ಟಪಡಿಸಲಿ ಎಂದು ಒತ್ತಾಯಿಸಿದರು.

https://pragati.taskdun.com/indian-air-forcemig-21-fighter-aircraft-crashhanumangarhrajasthan2-death/


Related Articles

Back to top button