Kannada NewsKarnataka NewsLatestPolitics

*ಶೋಭಾ ಕರಂದ್ಲಾಜೆ ಆಸ್ತಿ ಎಷ್ಟು?*

ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ


ಪ್ರಗತಿವಾಹಿನಿ ಸುದ್ದಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಬಿಟ್ಟು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ನಾಮಪತ್ರದಲ್ಲಿ ತಮ್ಮ ಆಸ್ತಿ ವಿವರವನ್ನು ಶೋಭಾ ಕರಂದ್ಲಾಜೆ ಘೋಷಿಸಿದ್ದಾರೆ. ಐದು ವರ್ಷಗಳಲ್ಲಿ ಶೋಭಾ ಕರಂದ್ಲಾಜೆ ಆಸ್ತಿ ಮೌಲ್ಯ 6 ಕೋಟಿಯಷ್ಟು ಹೆಚ್ಚಳವಾಗಿದೆ.

Home add -Advt

ಶೋಭಾ ಕರಂದ್ಲಾಜೆಯವರ ಚರಾಸ್ತಿ 9,23,66,909 ರೂ ಮೌಲ್ಯ, ಸ್ಥಿರಾಸ್ತಿ 6,78,97,000 ರೂ ಮೌಲ್ಯ. ಒಟ್ಟು 16.2 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಹೊಂದಿದ್ದಾಗಿ ಉಲ್ಲೇಖಿಸಿದ್ದಾರೆ.

ಇನ್ನು ಶೋಭಾ ಕರಂದ್ಲಾಜೆ 4 ಕೋಟಿ ರೂ ಸಾಲ ಹೊಂದಿದ್ದಾರೆ. 1 ಕೆಜಿ ಚಿನ್ನದ ಬಿಸ್ಕೆಟ್, 650ಗ್ರಾಂ ಚಿನದ ಆಭರಣ, 1620 ಗ್ರಾಂ ಬೆಳ್ಳಿ ಆಭರಣ, ವಸ್ತುಗಳು ಇವೆ.

ಅಲ್ಲದೇ ಶೋಭಾ ಕರಂದ್ಲಾಜೆ ವಿರುದ್ಧ ಎರಡು ಕ್ರಿಮಿನಲ್ ಕೇಸ್, ಒಂದು ಮಾನನಷ್ಟ ಮೊಕದ್ದಮೆ ಕೇಸ್ ಸೇರಿದಂತೆ 4 ಕೇಸ್ ಗಳು ಇವೆ ಎಂದು ಉಲ್ಲೇಖಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button