Kannada NewsKarnataka NewsLatest

*ಗ್ರಾಹಕರಿಗೆ ಶಾಕ್: ಹಾಲಿನ ದರ 4 ರೂ. ಹೆಚ್ಚಳ*

ಪ್ರಗತಿವಾಹಿನಿ ಸುದ್ದಿ : ದಿನ ಬಳಕೆ ವಸ್ತುಗಳ ದರ ಏರಿಕೆಯ ನಡುವೆಯೇ ಹಾಲಿನ ದರ ಏರಿಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಪ್ರತೀ ಲೀಟರ್ ಹಾಲಿನ ಮೇಲೆ 4 ರೂಪಾಯಿ ದರ ಏರಿಕೆ ಮಾಡಲು ಸರ್ಕಾರ ಮುಂದಾಗಿದ್ದು ಗ್ರಾಹಕರ ಜೇಬಿಗೆ ಕತ್ತರಿ ಬೀಳಲಿದೆ.

ರಾಜ್ಯ ಹಾಲು ಒಕ್ಕೂಟ ಹಾಲಿನ ದರವನ್ನು 5 ರೂಪಾಯಿ ಏರಿಕೆ ಮಾಡುವಂತೆ ಮನವಿ ಮಾಡಿತ್ತು. ಆದ್ರೆ 4 ರೂಪಾಯಿ ಏರಿಕೆಗೆ ಸಚಿವ ಸಂಪುಟ ಸಭೆ ಅಸ್ತು ಎಂದಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

Home add -Advt

Related Articles

Back to top button