ಪ್ರಗತಿವಾಹಿನಿ ಸುದ್ದಿ: ವಿಧಾನಪರಿಷತ್ ಚುನಾವಣೆಗೆ ಬಂಡಾಯವಾಗಿ ಸ್ಪರ್ಧೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಶಾಸಕ ರಘುಪತಿ ಭಟ್ ಅವರನ್ನು 6 ವರ್ಷಗಳ ಕಾಲ ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.
ನೈರುತ್ಯ ಪದವೀಧರ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದ ಬಿಜೆಪಿಯ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಉಚ್ಛಾಟಿಸಲಾಗಿದೆ ಎಂದು ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜು ಪಾಟೀಲ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವ ಬಗ್ಗೆ ಸ್ಪಷ್ಟನೆ ನೀಡುವಂತೆ ನೋಟಿಸ್ ನೀಡಲಾಗಿತ್ತು. ಆದರೆ ರಘುಪತಿ ಭಟ್ ಅವರಿಂದ ನೋಟಿಸ್ ಗೆ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಅವರನ್ನು ಉಚ್ಛಾಟನೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.
ಪಕ್ಷದ ಸೂಚನೆಯನ್ನು ಕಡೆಗಣಿಸಿ, ಪ್ರಸಕ್ತ ವಿಧಾನಪರಿಷತ್ ಚುನಾವಣೆಗೆ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ರಘುಪತಿ ಭಟ್ ಅವರು ಬಂಡಾಯವಾಗಿ ಸ್ಪರ್ಧಿಸುವ ಬಗ್ಗೆ ನಿರ್ಧರಿಸುವ ಮೂಲಕ ಪಕ್ಷದ ಶಿಸ್ತನ್ನು ಉಲ್ಲಂಘನೆ ಮಾಡುವುದು ಮಾತ್ರವಲ್ಲದೇ ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದಾರೆಂಬ ಕಾರಣಕ್ಕೆ ಈ ಕ್ರಮಕೈಗೊಳ್ಳಲಾಗಿದೆ ಎಂದು ಲಿಂಗರಾಜು ಪಾಟೀಲ್ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ