Kannada NewsKarnataka News

*ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು*

ಪ್ರಗತಿವಾಹಿನಿ ಸುದ್ದಿ: ಒಂದೇ ಕುಟುಂಬದ ನಾಲ್ವರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಯರೆಗನಹಳ್ಳಿಯಲ್ಲಿ ನಡೆದಿದೆ.

ಕಳೆದ ರಾತ್ರಿ ಗ್ಯಾಸ್ ಸೋರಿಕೆಯಿಂದ ಈ ಅವಘಡ ಸಂಭವಿಸಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಬಟ್ಟೆ ಐರನ್ ಮಾಡುತ್ತಿದ್ದ ಮಂಜುಳ (39), ಕುಮಾರಸ್ವಾಮಿ (45), ಅರ್ಚನಾ (19), ಸ್ವಾತಿ (19) ಎಂಬುವರ ಶವಗಳು ಪತ್ತೆಯಾಗಿವೆ.

ಸುದ್ದಿ ತಿಳಿದ ಕೂಡಲೇ ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮನೆಯಲ್ಲಿದ್ದ ಮೂರು ಗ್ಯಾಸ್ ಸಿಲಿಂಡರ್‌ಗಳನ್ನು ಪೊಲೀಸ್ ಸಮ್ಮುಖದಲ್ಲಿ ಹೊರೆಗೆ ತರಲಾಗಿದೆ. ಈ ಬಗ್ಗೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Home add -Advt

Related Articles

Back to top button