Kannada NewsKarnataka NewsLatest

ಸ್ಮಾರ್ಟ್ ಸಿಟಿ ಯೋಜನೆ ಕೇಂದ್ರದಿಂದ ಶಾಕಿಂಗ್ ಮಾಹಿತಿ

 

ಪ್ರಗತಿವಾಹಿನಿ ಸುದ್ದಿ, ನವದೆಹಲಿ:  

ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಸ್ಮಾರ್ಟ್ ಸಿಟಿ ಸಂಬಂಧ ಕೇಂದ್ರ ಸರಕಾರದ ಶಾಕಿಂಗ್ ಮಾಹಿತಿ ನೀಡಿದೆ.

ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ ಕೋರೆ ಕೇಳಿದ ಪ್ರಶ್ನೆಗೆ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರದೀಪ್ ಸಿಂಗ್ ಪುರಿ ಉತ್ತರಿಸಿದ್ದಾರೆ. 

ಸ್ಮಾರ್ಟ್ ಸಿಟಿ ಯೋಜನೆ ಜಾರಿಯಾಗಿ ಈಗ 4 ವರ್ಷವಾಗಿದೆ. ಕೇಂದ್ರ ಸರಕಾರ ಈವರೆಗ ಕರ್ನಾಟಕದ ಸ್ಮಾರ್ಟ್ ಸಿಟಿ ಯೋಜನೆಗೆ ಕೇಂದ್ರ ಸರಕಾರ (ರಾಜ್ಯ ಸರಕಾರ ಬಿಡುಗಡೆ ಮಾಡಿದ್ದು ಪ್ರತ್ಯೇಕ) ಒಟ್ಟೂ 1255 ಕೋಟಿ ರೂ. ಬಿಡುಗಡೆ ಮಾಡಿದೆ.  ಆದರೆ ಕರ್ನಾಟಕ ಬಳಸಿದ್ದು ಕೇವಲ 190.21 ಕೋಟಿ ರೂ.

ಕರ್ನಾಟಕದ 7 ನಗರಗಳು ಸ್ಮಾರ್ಟ್ ಸಿಟಿ ಯೋಜನೆಗೆ ಆಯ್ಕೆಯಾಗಿವೆ.

ಬೆಳಗಾವಿಗೆ 196 ಕೋಟಿ ರೂ. ಬಿಡುಗಡೆಯಾಗಿದ್ದು, 46.11 ಕೋಟಿ ರೂ. ಮಾತ್ರ ಬಳಕೆಯಾಗಿದೆ. 

ಬೆಂಗಳೂರಿಗೆ 158 ಕೋಟಿ ರೂ. ಬಿಡುಗಡೆಯಾಗಿದ್ದು, 4.96 ಕೋಟಿ ರೂ. ಮಾತ್ರ ಬಳಕೆಯಾಗಿದೆ. ದಾವಣಗೇರೆಗೆ 196 ಕೋಟಿ ರೂ. ಬಿಡುಗಡೆಯಾಗಿದ್ದು, 66.57 ಕೋಟಿ ರೂ. ಮಾತ್ರ ಬಳಕೆಯಾಗಿದೆ. 

ಮಂಗಳೂರಿಗೆ 117 ಕೋಟಿ ರೂ. ಬಿಡುಗಡೆಯಾಗಿದ್ದು, 15.20 ಕೋಟಿ ರೂ. ಮಾತ್ರ ಬಳಕೆಯಾಗಿದೆ. ಶಿವಮೊಗ್ಗಕ್ಕೆ 196 ಕೋಟಿ ರೂ. ಬಿಡುಗಡೆಯಾಗಿದ್ದು, 13.05 ಕೋಟಿ ರೂ. ಮಾತ್ರ ಬಳಕೆಯಾಗಿದೆ. ತುಮಕೂರಿಗೆ 196 ಕೋಟಿ ರೂ. ಬಿಡುಗಡೆಯಾಗಿದ್ದು, 34.88 ಕೋಟಿ ರೂ. ಮಾತ್ರ ಬಳಕೆಯಾಗಿದೆ.

ಹುಬ್ಬಳ್ಳಿ-ಧಾರವಾಡಕ್ಕೆ 196 ಕೋಟಿ ರೂ. ಬಿಡುಗಡೆಯಾಗಿದ್ದು, 9.44ಕೋಟಿ ರೂ. ಮಾತ್ರ ಬಳಕೆಯಾಗಿದೆ. 

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button