
ಪ್ರಗತಿವಾಹಿನಿ ಸುದ್ದಿ, ಚಂಡಿಗಡ: ಪಂಜಾಬ್ ಬಿಜೆಪಿ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಲ್ವಿಂದರ್ ಗಿಲ್ ಮೇಲೆ ಅಮೃತಸರದ ಜಂಡಿಯಾಲಾ ಗುರು ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಗಳು ಭಾನುವಾರ ರಾತ್ರಿ ಗುಂಡು ಹಾರಿಸಿ ಪರಾರಿಯಾಗಿದ್ದಾರೆ.
ಮುಖಕ್ಕೆ ಗುಂಡು ಬಡಿದಿದ್ದು ಗದ್ದದ ಮೂಳೆ ಮುರಿತಕ್ಕೆ ಒಳಗಾದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಕೆಡಿ ಆಸ್ಪತ್ರೆಯ ಡಾ.ರಣಧೀರ್ ತಿಳಿಸಿದ್ದಾರೆ.

ಗುಂಡಿನ ದಾಳಿ ನಡೆಸಿದವರು ಯಾರು, ಯಾವ ಕಾರಣಕ್ಕೆ ನಡೆದಿದೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ