*ಹುಬ್ಬಳ್ಳಿ ಮರ್ಯಾದಾ ಹತ್ಯೆ ಪ್ರಕರಣದ ಆರೋಪಿಗಳನ್ನು ಶೂಟ್ ಮಾಡಿ: ಮುತಾಲಿಕ್ ಆಗ್ರಹ*

ಪ್ರಗತಿವಾಹಿನಿ ಸುದ್ದಿ : ರಾಜ್ಯವನ್ನೆ ಬೆಚ್ಚಿ ಬಿಳಿಸಿದ ಹುಬ್ಬಳ್ಳಿಯ ಮರ್ಯಾದಾ ಹತ್ಯೆ ಪ್ರಕರಣದಲ್ಲಿ ಈಗಾಗಲೇ ಆರೋಪಿಗಳ ಬಂಧನವಾಗಿದ್ದು, ಪ್ರಕರಣದ ಬಗ್ಗೆ ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.
ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರದಲ್ಲಿ ಗರ್ಭಿಣಿ ಪುತ್ರಿಯನ್ನು ತಂದೆಯೇ ಕೊಚ್ಚಿ ಕೊಂದಿದ್ದಾನೆ. ದಲಿತ ಹುಡುಗನ ಮದುವೆಯಾಗಿದ್ದಕ್ಕೆ ಈ ಮರ್ಯಾದೆ ಹತ್ಯೆ ನಡೆದಿದೆ. ಮರ್ಯಾದೆ ಹತ್ಯೆಯ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಅಂಬೇಡ್ಕರ್ ಕನಸು ಇನ್ನು ನನಸಾಗಿಲ್ಲ ಎನ್ನುವುದಕ್ಕೆ ಇದು ಸಾಕ್ಷಿ. ಹೊಡೆದವರಿಗೆ ಹೃದಯವಿಲ್ವ? ರಾಕ್ಷಸರು ಅವರು. ಸರ್ಕಾರ ಕೂಡಾ ಈ ಬಗ್ಗೆ ಸರಿಯಾಗಿ ಕ್ರಮ ಕೈಗೊಳ್ಳುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.
ಸ್ವಂತ ಮಗಳು ಗರ್ಭಿಣಿಯಾದ್ರು ತಂದೆ ಕೊಲೆ ಮಾಡಿದ್ದಾನೆ. ಗರ್ಭಿಣಿ ಹೊಟ್ಟೆಗೆ ಕೊಡಲಿ ಹಾಕಿರೋನು ರಾಕ್ಷಸ. ಅವರನ್ನು ಜೈಲಿಗೆ ಹಾಕೋ ಅವಶ್ಯಕತೆ ಇಲ್ಲ. ಬದಲಿಗೆ ಶೂಟ್ ಮಾಡಬೇಕು. ದಲಿತರು ಪ್ರೀತಿನೇ ಮಾಡಬಾರದಾ? ಇಂತಹ ಘಟನೆ ಮತ್ತೆಂದೂ ಆಗದಂತಹ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು.


