Election NewsKannada NewsKarnataka NewsNationalPolitics

*ಕಮಲಾ ಹ್ಯಾರಿಸ್ ಕಚೇರಿ ಮೇಲೆ ಗುಂಡಿನ ದಾಳಿ*

ಪ್ರಗತಿವಾಹಿನಿ ಸುದ್ದಿ: ಕಮಲಾ ಹ್ಯಾರಿಸ್ ಅವರ ಚುನಾವಣಾ ಪ್ರಚಾರ ಕಚೇರಿ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಘಟನೆ ಅಮೆರಿಕದ ಅರಿಜೋನಾದಲ್ಲಿ ನಡೆದಿದೆ.

ಅಪರಿಚಿತರು ಗುಂಡಿನ ದಾಳಿ ನಡೆಸಿರುವ ಕುರಿತು ಪೊಲೀಸರು ಮಾಹಿತಿ ನೀಡಿದ್ದಾರೆ. ಕಚೇರಿಯೊಳಗೆ ಯಾರೂ ಇರಲಿಲ್ಲ. ಆದರೆ ಇದು ಆ ಕಟ್ಟಡದಲ್ಲಿ ಕೆಲಸ ಮಾಡುವವರ ಉಂಟುಮಾಡುತ್ತದೆ. ಮತ್ತು ಹತ್ತಿರದವರ ಸುರಕ್ಷತೆಯ ಬಗ್ಗೆ ಕಳವಳವನ್ನು

ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಕಮಲಾ ಹ್ಯಾರಿಸ್‌ ಅವರು ನಿಧಿ ಸಂಗ್ರಹಣೆ ಮತ್ತು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಹಲವು ರಾಜ್ಯಗಳಲ್ಲಿ ವ್ಯಾಪಕ ಬೆಂಬಲ ಸಿಗುತ್ತಿದ್ದು, ಇದನ್ನು ಸಹಿಸಲಾಗದ ಯಾರೋ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ. ಕಮಲಾ ಅವರು ಪೆನ್ಸಿಲ್ವೇನಿಯಾ, ವಿಸ್ಕಾನ್ಸಿನ್ ಮತ್ತು ಮಿಚಿಗನ್ ರಾಜ್ಯಗಳಲ್ಲಿ ಶೇ.4 ಪಾಯಿಂಟ್‌ಗಳ ಮುನ್ನಡೆ ಸಾಧಿಸಿದ್ದಾರೆ. ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಎರಡನೇ ಬಾರಿಗೆ ಹತ್ಯೆ ಯತ್ನ ನಡೆದ ಒಂದು ವಾರದ ಬಳಿಕ ಈ ಘಟನೆ ಸಂಭವಿಸಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button