
ಪ್ರಗತಿವಾಹಿನಿ ಸುದ್ದಿ: ಗ್ರಾಮ ಪಂಚಾಯತ ಸದಸ್ಯ ಮಾತನಾಡುತ್ತ ನಿಂತಿದ್ದ ವೇಳೆ ಇಬ್ಬರು ಅಪರಿಚಿತರು ಗುಂಡಿನ ದಾಳಿ ನಡೆಸಿದ ಘಟನೆ ಬೆಂಗಳೂರಿನ ನೆಲಮಂಗಲ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ನಡೆದಿದ್ದು, ಘಟನೆಯಿಂದ ಜನ ಬೆಚ್ಚಿಬೆದಿದ್ದಾರೆ.
ಸಲೀಂ ಅಂಗಡಿ ಮಾತನಾಡುತ್ತಿದ್ದ ವೇಳೆ ಇಬ್ಬರು ವ್ಯಕ್ತಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಸಲೀಂ ಕೈಗೆ ಗಂಭೀರ ಗಾಯವಾಗಿದ್ದು ನೆಲಮಂಗಲ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
ಆಸ್ಪತ್ರೆ ಮುಂದೆ ಭಾರೀ ಸಂಖ್ಯೆಯಲ್ಲಿ ಗ್ರಾಮಸ್ಥರು ಜಮಾಯಿಸಿದ್ದಾರೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ನೆಲಮಂಗಲ ಡಿವೈಎಸ್ಪಿ ಜಗದೀಶ್ ಭೇಟಿ ನೀಡಿದ್ದಾರೆ. ಖಾಸಗಿ ಆಸ್ಪತ್ರೆಗೆ ಪೊಲೀಸರು ಬಿಗಿ ಭದ್ರತೆ ಕಲ್ಪಿಸಿದ್ದಾರೆ.




