Karnataka NewsPolitics

*ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ: ಹೋಮ್ ಮಿನಿಸ್ಟರ್ ರಿಯಾಕ್ಷನ್*

ಪ್ರಗತಿವಾಹಿನಿ ಸುದ್ದಿ: ಗುಂಡಿನ ದಾಳಿ ಬಳಿಕ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುಂಡಿನ ದಾಳಿಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಪೊಲೀಸರ ಬಳಿ ಈ ಬಗ್ಗೆ ಹೆಚ್ಚಿನ ಮಾಹಿತಿ ಕೇಳಿದ್ದೇನೆ ಎಂದು ಗೃಹ ಸಚಿವ ಪರಮೇಶ್ವರ ತಿಳಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿ ಮಾಧ್ಯಮದವರೊಂದಿಗೆ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ಮೇಲೆ ಗುಂಡಿನ ದಾಳಿ ನಡೆದಿರುವ ಘಟನೆ ಬಗ್ಗೆ ಗೃಹ ಪ್ರತಿಕ್ರಿಯೆ ನೀಡದ ಅವರು, ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಅಟ್ಯಾಕ್ ನಡೆದಿರುವ ವಿಚಾರ ನನಗೆ ಗೊತ್ತಾಗಿದೆ. ರಾತ್ರಿ ಒಂದು ಗಂಟೆಗೆ ಈ ಘಟನೆ ನಡೆದಿದ್ದು, ಪೊಲೀಸರ ಬಳಿ ಈ ಬಗ್ಗೆ ಹೆಚ್ಚಿನ ಮಾಹಿತಿ ಕೇಳಿದ್ದೇನೆ ಎಂದು ತಿಳಿಸಿದರು.

Home add -Advt

ಗುಂಡಿನ ದಾಳಿಯಿಂದ ಗಾಯಗೊಂಡಿರುವ ರಿಕ್ಕಿ ರೈ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುಂಡಿನ ದಾಳಿಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಸದ್ಯ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವೈದ್ಯರು ಔಟ್ ಆಫ್ ಡೆಂಜರ್ ಎಂದು ಹೇಳಿದ್ದಾರೆ ಎಂದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿದೆ. ಎಲ್ಲ ಪ್ಯಾರಾ ಮೀಟರ್ಸ್ ಹೇಳುತ್ತಿವೆ. ಕ್ರೈಂ ಪ್ರಕರಣಗಳು ಕಡಿಮೆಯಾಗಿವೆ. ನಾನು ಏನಾದರೂ ಹೇಳಿದರೆ ತಿರುಚಿ ಬರೆಯುತ್ತೀರಾ. ಪೊಲೀಸ್ ಕಮಿಷನರ್ ಬೀಫ್ ಮಾಡಿದ್ದಾರೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಅಪರಾಧಗಳು ಕಡಿಮೆಯಾಗಿದೆ. ಸೈಬರ್ ಕೇಸ್ ಕಡಿಮೆಯಾಗಿದೆ. ಲಾ ಆ್ಯಂಡ್ ಆರ್ಡರ್ ಎಲ್ಲಾ ಸರಿಯಾಗಿದೆ ಎಂದರು.

Related Articles

Back to top button