CrimeKannada NewsKarnataka NewsLatest

*ಗುಜರಿ ವ್ಯಾಪಾರಿ ಹತ್ಯೆ ಪ್ರಕರಣ*: *ಪೊಲೀಸರಿಗೆ ಶರಣಾದ ಕಾಂಗ್ರೆಸ್ ಮುಖಂಡ ನವೀದ್*

ಪ್ರಗತಿವಾಹಿನಿ ಸುದ್ದಿ: ಕಾರಿನಲ್ಲೇ ಗುಜರಿ ವ್ಯಾಪಾರಿಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಕಾಂಗ್ರೆಸ್ ನುಖಂಡನೊಬ್ಬ ಪೊಲೀಸರಿಗೆ ಶರಣಾಗಿರುವ ಘಟನೆ ನಡೆದಿದೆ.

ಗುಜರಿ ವ್ಯಾಪಾರಿ ಇಮ್ರಾಜ್ ಪಾಷಾ ಹತ್ಯೆಯ್ತಾದ ವ್ಯಕ್ತಿ. ಬೆಂಗಳೂರಿನ ಬನ್ನೇರುಘಟ್ಟ ಮೂಲದ ಇಮ್ರಾಜ್ ಪಾಷಾಗೆ ಮೈಸೂರು ರಸ್ತೆ ಹಾಗೂ ಬ್ಯಾಟರಾಯನಪುರ ಭಾಗದಲ್ಲಿ ವ್ಯವಹಾರ ನಡೆಸದಂತೆ ಕಾಂಗ್ರೆಸ್ ಮುಖಂಡ ಎಚ್ಚರಿಕೆ ನೀಡಿದ್ದ. ಆದರೆ, ಇಮ್ರಾಜ್ ತನ್ನ ವ್ಯಾಪಾರ ವಿಸ್ತರಿಸಿದ್ದರಿಂದ ಕೋಪಗೊಂಡು ಮಾತುಕತೆ ನೆಪದಲ್ಲಿ ಕರೆಸಿ ತನ್ನ ಲೈಸೆನ್ಸ್ಡ್ ಪಿಸ್ತೂಲ್‌ನಿಂದ ಗುಂಡು ಹಾರಿಸಿ ಕೊಲೆ ಮಾಡಿದ್ದ.

ಪ್ರಕರಣ ಸಂಬಂಧ ಇದೀಗ ಆರೋಪಿ, ಕಾಂಗ್ರೆಸ್ ಮುಖಂಡ ನವೀದ್ ಬೇಗ್ ಬಾಗಲೂರು ಪೊಲೀಸರುಗೆ ಶರಣಾಗಿದ್ದಾನೆ. ಇದೇ ವೇಳೆ ಆತನ ಸಹಚರ ಮುಬಾರಕ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ನವೀದ್ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ. ಸದ್ಯಸದ್ಯ ಕೃತ್ಯಕ್ಕೆ ಬಳಸ್ದಿದ್ದ ಪಿಸ್ತೂಲ್ ವಶಪಡಿಸಿಕೊಂಡು ಎಫ್‌ಎಸ್‌ಎಲ್‌ಗೆ ಕಳುಹಿಸಿರುವ ಪೊಲೀಸರು, ಆರೋಪಿಯನ್ನು ಕೋರ್ಟ್ಗೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆಯಲು ಸಿದ್ಧತೆ ನಡೆಸಿದ್ದಾರೆ.

Related Articles

Back to top button