ಪ್ರಗತಿವಾಹಿನಿ ಸುದ್ದಿ; ಜೋಹಾನ್ಸ್ ಬರ್ಗ್: ದುಷ್ಕರ್ಮಿಯೊಬ್ಬ ಬಾರ್ ನಲ್ಲಿ ಮನಬಂದಂತೆ ನಡೆಸಿದ ಗುಂಡಿನ ದಾಳಿಯಲ್ಲಿ 14 ಜನರು ಮೃತಪಟ್ಟ ಘಟನೆ ದಕ್ಷಿಣ ಆಫ್ರಿಕಾದ ಸೊವೆಟೊ ಪಟ್ಟಣದಲ್ಲಿ ನಡೆದಿದೆ.
ದಕ್ಷಿಣ ಆಫ್ರಿಕಾದ ಪ್ರಮುಖ ನಗರ ಜೋಹಾನ್ಸ್ ಬರ್ಗ್ ಸಮೀಪವೇ ಈ ಘಟನೆ ನಡೆದಿದೆ. ಬಾರ್ ನಲ್ಲಿ ದುಷ್ಕರ್ಮಿ ಏಕಾಏಕಿ ಗುಂಡಿನ ದಾಳಿ ನಡೆಸಲಾರಂಭಿಸಿದ್ದಾನೆ. ಘಟನೆಯಲ್ಲಿ 12 ಜನರು ಸಾವನ್ನಪ್ಪಿದ್ದರು, 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಬ್ಬರು ಸಾವನ್ನಪ್ಪಿದ್ದು, ಗುಮ್ಡಿನದಾಳಿಯಲ್ಲಿ ಒಟ್ಟು 14 ಜನರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿ ಲೆಫ್ಟಿನೆಂಟ್ ಎಲಿಯಾಸ್ ಮಾವೆಲಾ ಮಾಹಿತಿ ನೀಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ದುಷ್ಕರ್ಮಿಗಳ ಅಟ್ಟಹಾಸ ಹೆಚ್ಚುತ್ತಿದ್ದು, ಎರಡು ದಿನಗಳ ಹಿಂದಷ್ಟೇ ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ಅವರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿತ್ತು. ಈ ಘಟನೆ ಮಾಸುವ ಮುನ್ನವೇ ಇದೀಗ ದುಷ್ಕರ್ಮಿ ಅತ್ಟಹಾಸಕ್ಕೆ 14 ಜನರು ಬಲಿಯಾಗಿದ್ದಾರೆ.
ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮೂವರ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ